ಮೊದಲ ಬ್ಯಾಚ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಜಿಯೋ ಇನ್‌ಸ್ಟಿಟ್ಯೂಟ್
Team Udayavani, Jul 20, 2022, 10:12 PM IST
ಮುಂಬೈ: ಜಿಯೋ ಇನ್‌ಸ್ಟಿಟ್ಯೂಟ್ ತನ್ನ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಇಂದು ನಡೆದ ಕಾರ್ಯಕ್ರಮದಲ್ಲಿ ಸ್ವಾಗತಿಸಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅವರ ಪಾಲಕರು, ಜಿಯೋ ಇನ್‌ಸ್ಟಿಟ್ಯೂಟ್‌ನ ಸಿಬ್ಬಂದಿ, ರಿಲಾಯನ್ಸ್ ಕುಟುಂಬದ ಸದಸ್ಯರು ಹಾಗೂ ಉದ್ಯಮ ಮತ್ತು ಶಿಕ್ಷಣ ವಲಯದ ಮುಖ್ಯಸ್ಥರು ಭಾಗವಹಿಸಿದ್ದರು. ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡಿಜಿಟಲ್ ಮೀಡಿಯಾ ಮತ್ತು ಮಾರ್ಕೆಟಿಂಗ್ ಸಂಹನಗಳಲ್ಲಿ ಒಟ್ಟು ಎರಡು ಸ್ನಾತಕೋತ್ತರ ಪದವಿಯನ್ನು ಜಿಯೋ ಇನ್‌ಸ್ಟಿಟ್ಯೂಟ್ ಆರಂಭಿಸುತ್ತಿದೆ. ತರಗತಿಗಳು ಜುಲೈ 21 ರಿಂದ ಆರಂಭವಾಗಲಿದೆ.
ಜಿಯೋ ಇನ್‌ಸ್ಟಿಟ್ಯೂಟ್‌ನ ಮೊದಲ ಸ್ನಾತಕೋತ್ತರ ಪದವಿಯ ಬ್ಯಾಚ್‌ನಲ್ಲಿ ವಿವಿಧ ಪ್ರದೇಶಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿದ್ದಾರೆ. 19 ರಾಜ್ಯಗಳು ಮತ್ತು ದಕ್ಷಿಣ ಆಫ್ರಿಕಾ, ಭೂತಾನ್, ನೇಪಾಳ ಮತ್ತು ಘಾನಾ ದೇಶದ ವಿದ್ಯಾರ್ಥಿಗಳು ಮೊದಲ ಬ್ಯಾಚ್‌ನಲ್ಲಿದ್ದಾರೆ. ಇಂಜಿನಿಯರಿಂಗ್, ವಿಜ್ಞಾನ, ಕಲೆ, ವಾಣಿಜ್ಯ, ಸಮೂಹ ಮಾಧ್ಯಮ ಮತ್ತು ಮ್ಯಾನೇಜ್‌ಮೆಂಟ್ ಸ್ಟಡೀಸ್/ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗದಿಂದ ಬಂದ ವಿದ್ಯಾರ್ಥಿಗಳೂ ಇದರಲ್ಲಿದ್ದಾರೆ. ಜಾಹೀರಾತು, ಆಟೋಮೋಟಿವ್, ಬ್ಯಾಂಕಿಂಗ್, ನಿರ್ಮಾಣ, ಡಿಜಿಟಲ್ ಮಾಧ್ಯಮ, ಎಡ್‌ಟೆಕ್, ಫಿನ್‌ಟೆಕ್, ಆರೋಗ್ಯ ಸೇವೆ, ಮಾಹಿತಿ ತಂತ್ರಜ್ಞಾನ, ಲಾಜಿಸ್ಟಿಕ್ಸ್, ಸಣ್ಣ ಹಣಕಾಸು, ತೈಲ ಮತ್ತು ಅನಿಲ, ಫಾರ್ಮಾ, ಟೆಲಿಕಾಂ, ಸರ್ಕಾರ, ಎನ್‌ಜಿಒ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರಾಸರಿ ಸುಮಾರು 4 ವರ್ಷಗಳವರೆಗೆ ಕೆಲಸ ಮಾಡಿದ ಅನುಭವವನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ದೆಹಲಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಿಂದ ಸ್ವಾಗತ
ಎರಡೂ ಕೋರ್ಸ್‌ಗಳನ್ನು ಜಾಗತಿಕ ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮದ ಪರಿಣಿತರು ಮತ್ತು ಪ್ರೊಫೆಸರ್‌ಗಳು ಬೋಧಿಸಲಿದ್ದಾರೆ. ಪ್ರಾಥಮಿಕ ಬೋಧನೆಯ ಜೊತೆಗೆ ಅಗತ್ಯ ಜೀವನ ಕೌಶಲವನ್ನೂ ರೂಪಿಸುವಲ್ಲಿ ಜಿಯೋ ಇನ್‌ಸ್ಟಿಟ್ಯೂಟ್ ಗಮನ ಹರಿಸಿದೆ. ವಿದೇಶದಲ್ಲಿ ಅಧ್ಯಯನ ಅವಧಿಯನ್ನೂ ಜಿಯೋ ಇನ್‌ಸ್ಟಿಟ್ಯೂಟ್ ಯೋಜಿಸಿದ್ದು, ಜನಪ್ರಿಯ ಜಾಗತಿಕ ವಿಶ್ವವಿದ್ಯಾಲಯಗಳಿಗೆ ವಿದ್ಯಾರ್ಥಿಗಳು ತೆರೆದುಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.