ಜೀಪ್‌ಗೆ ಗುರಾಣಿಯಾದ ಯುವಕ
Team Udayavani, Apr 15, 2017, 3:50 AM IST
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಯುವಕರ ಗುಂಪೊಂದು ಸಿಆರ್‌ಪಿಎಫ್ ಯೋಧರನ್ನು ಪೀಡಿಸಿ, ಅವಮಾನಿಸಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಶ್ರೀನಗರ ಲೋಕಸಭೆ ಚುನಾವಣೆ ದಿನ ಸೇನಾ ಪಡೆಯ ಜೀಪ್ ಮುಂಭಾಗ ಯುವಕನೊಬ್ಬನನ್ನು ಕೂರಿಸಿ, ಕಟ್ಟಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಕಾಶ್ಮೀರದ ಬುಡಗಾಂ ಜಿಲ್ಲೆಯ ಬೀರಾವಾಹ್ ಗ್ರಾಮದಲ್ಲಿ ಸಾಗುತ್ತಿದ್ದ ಸೇನಾ ವಾಹನಗಳ ಮುಂಚುಣಿಯಲ್ಲಿದ್ದ ಜೀಪ್ ಮುಂಭಾಗದಲ್ಲಿ ಯುವಕನೊಬ್ಬನನ್ನು ಹಗ್ಗದಿಂದ ಕಟ್ಟಲಾಗಿತ್ತು. ಗ್ರಾಮಸ್ಥರ ಕಲ್ಲು ತೂರಾಟಕ್ಕೆ ಪ್ರತಿಯಾಗಿ ಆ ಯುವಕನನ್ನು “ಮಾನವ ಗುರಾಣಿ’ ರೀತಿ ಬಳಸಲಾಗಿರುವ ವೀಡಿಯೋ ಎಲ್ಲೆಡೆ ದೊಡ್ಡ ಸುದ್ದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು- ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಇತ್ತೀಚೆಗೆ ನಡೆದ ಎರಡೂ ಘಟನೆಗಳು “ಆಘಾತಕಾರಿ’ ಹಾಗೂ “ಅನಿರೀಕ್ಷಿತ’ ವಿದ್ಯಮಾನ ಎಂದಿದ್ದಾರೆ. ಜತೆಗೆ, ಈ ಕುರಿತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಸ್ತೃತ ವರದಿ ನೀಡಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ “ಘಟನೆ ಅಚ್ಚರಿ ಹುಟ್ಟಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು,” ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ಅಬ್ದುಲ್ಲಾ ಹೇಳಿದ್ದಾರೆ.
ಬಾಲಿವುಡ್ ಖಂಡನೆ: ಜಮ್ಮು-ಕಾಶ್ಮೀರದ ಚಡೂರದಲ್ಲಿ ಸಿಆರ್‌ಪಿಎಫ್ ಯೋಧರನ್ನು ಕೀಳಾಗಿ ನಡೆಸಿಕೊಂಡ ಘಟನೆಯನ್ನು ಬಾಲಿವುಡ್ ನಟರಾದ ಅನುಪಮ್ ಖೇರ್, ಫರ್ಹಾನ್ ಅಖ್ತರ್, ರಣದೀಪ್ ಹೂಡಾ, ಬಹುಭಾಷಾ ನಟ ಕಮಲ್ ಹಾಸನ್ ಸೇರಿ ಹಲವು ನಟರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.