Haryana: ದುಷ್ಕರ್ಮಿಗಳಿಂದ ಜೆಜೆಪಿ ನಾಯಕನ ಗುಂಡಿಕ್ಕಿ ಹತ್ಯೆ… ಪೊಲೀಸರಿಂದ ಶೋಧ
Team Udayavani, Jul 11, 2024, 9:14 AM IST
ಹರಿಯಾಣ: ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ನಾಯಕನನ್ನು ಮೂವರು ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈರುವ ಘಟನೆ ಹರ್ಯಾಣದ ಹನ್ಸಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಹಿಸಾರ್‌ನ ಹಂಸಿಯ ರವೀಂದರ್ ಸೈನಿ ಎಂದು ಗುರುತಿಸಲಾಗಿದ್ದು,ಸೈನಿ ಅವರು ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು ಎನ್ನಲಾಗಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸೈನಿ ತನ್ನ ಗನ್‌ಮ್ಯಾನ್‌ನೊಂದಿಗೆ ತನ್ನ ಶೋರೂಮ್‌ನಿಂದ ಹೊರಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸೈನಿ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ರವೀಂದರ್ ಸೈನಿ, ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಯೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಹನ್ಸಿಯ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟೋತ್ತಿಗಾಗಲೇ ಸೈನಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.
ರವೀಂದರ್ ಸೈನಿ ಅವರು ಹನ್ಸಿಯಲ್ಲಿರುವ ಹೀರೋ ಮೋಟಾರ್‌ಸೈಕಲ್ ಶೋರೂಂ ನ ಮಾಲೀಕರಾಗಿದ್ದಾರೆ ಸಂಜೆ 6 ಗಂಟೆಗೆ ತಮ್ಮ ಕಚೇರಿಯಿಂದ ಹೊರಗೆ ಬಂದು ಫೋನ್ ಕರೆ ಮಾಡುತ್ತಿದ್ದಾಗ ಮೂವರು ಅಪರಿಚಿತ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹನ್ಸಿ ನಗರ ಪೊಲೀಸ್ ಠಾಣೆ ಗೃಹ ಅಧಿಕಾರಿ (ಎಸ್‌ಎಚ್‌ಒ) ಜಗಜಿತ್ ಸಿಂಗ್ ಹೇಳಿದ್ದಾರೆ.
ಮೂರೂ ವರ್ಷಗಳ ಹಿಂದೆ ಸೈನಿ ಅವರನ್ನು ಕೊಲ್ಲುವ ವಿಫಲ ಯತ್ನ ನಡೆದಿತ್ತು ಇದಾದ ಬಳಿಕ ಸೈನಿ ಅವರು ಗನ್ ಮ್ಯಾನ್ ಇಟ್ಟುಕೊಂಡಿದ್ದರು ಬುಧವಾರವೂ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಓದುವ ಸಂದರ್ಭ ಗನ್ ಮ್ಯಾನ್ ಸೈನಿ ಜೊತೆಗಿದ್ದರು ಆದರೆ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದ ಕಾರಣ ದುಷ್ಕರ್ಮಿಗಳ ಮೇಲೆ ಗುಂಡು ಹರಿಸಲು ಸಾಧ್ಯವಾಗಲಿಲ್ಲ ಎಂದು ಗನ್ ಮ್ಯಾನ್ ಹೇಳಿಕೆ ನೀಡಿದ್ದಾರೆ. ಸದ್ಯ ಸೈನಿ ಅವರ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.
ಇನ್ನು ಘಟನೆ ಕುರಿತು ಹರ್ಯಾಣ ಮುಖ್ಯಮಂತ್ರಿ (ಸಿಎಂ) ನಯಾಬ್ ಸಿಂಗ್ ಅವರು ರವೀಂದರ್ ಸೈನಿ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ, ದಾಳಿಕೋರರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಘಟನೆ ಸಂಬಂಧ ಜೆಜೆಪಿ ನಾಯಕನ ಭದ್ರತೆಯಲ್ಲಿ ನಿಯೋಜನೆಗೊಂಡಿದ್ದ ಗನ್‌ಮ್ಯಾನ್‌ನನ್ನು ಅಮಾನತುಗೊಳಿಸಲಾಗಿದ್ದು ಅಲ್ಲದೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ: Lokayukta Raid: ಬೆಳ್ಳಂ ಬೆಳಗ್ಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.