ಜಮ್ಮು-ಕಾಶ್ಮೀರ; 10ಗಂಟೆಗಳ ಸೇನಾ ಕಾರ್ಯಾಚರಣೆ ಅಂತ್ಯ, ಮೂವರು ಉಗ್ರರ ಹತ್ಯೆ
Team Udayavani, Sep 28, 2019, 5:08 PM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರಂಬಾನ್ ಜಿಲ್ಲೆಯ ಬಾಟೋಟೆ ನಗರದ ಮನೆಯೊಂದರಲ್ಲಿ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇರಿಸಿಕೊಂಡಿದ್ದ ಉಗ್ರರ ವಿರುದ್ಧ ಸತತ ಹತ್ತು ಗಂಟೆಗಳ ಕಾಲ ಸೇನಾಪಡೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹತ್ಯೆಗೈದಿದ್ದು, ಒತ್ತೆಯಾಳನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಂಬಾನ್ ನ ಬಾಟೋಟೆ ಪ್ರದೇಶದಲ್ಲಿನ ಮನೆಯೊಳಕ್ಕೆ ನುಗ್ಗಿದ್ದ ಮೂವರು ಉಗ್ರರು, ಮನೆಯಲ್ಲಿದ್ದ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇಟ್ಟುಕೊಂಡು, ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸೇನೆ ಪ್ರತಿದಾಳಿ ಮೂಲಕ ಕಾರ್ಯಾಚರಣೆ ನಡೆಸಿತ್ತು.
ಸತತ ಹತ್ತು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಈ ಸಂದರ್ಭದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿರುವುದಾಗಿ ಜಮ್ಮು ಇನ್ಸ್ ಪೆಕ್ಟರ್ ಜನರಲ್ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಉಳಿದ ಇಬ್ಬರು ಉಗ್ರರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
#UPDATE Jammu Inspector General of police (IG) Mukesh Singh: Three terrorists have been eliminated in Batote town of Ramban district of Jammu Zone. https://t.co/7Pd40KS6Sn
— ANI (@ANI) September 28, 2019
ಶನಿವಾರ ಬೆಳಗ್ಗೆ ಹೈವೇ ಟೌನ್ ನಲ್ಲಿ ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿದ ಬಳಿಕ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಮೂವರು ಉಗ್ರರು ಮನೆಯೊಳಗೆ ಹೋಗಿ ಪರಾರಿಯಾಗಲು ಯತ್ನಿಸಿದ್ದರು. ಆದರೆ ಸೇನೆಯ ಕಾರ್ಯಾಚರಣೆಯಲ್ಲಿ ಮೂವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಪೂರ್ಣಗೊಂಡಿದೆ. ಒತ್ತೆಯಾಳನ್ನು ರಕ್ಷಿಸಲಾಗಿದೆ ಎಂದು ಸಿಂಗ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.