ಪ್ರತೀಕಾರ: ಗಡಿಯಲ್ಲಿ ಮತ್ತೆ ಅಟ್ಟಹಾಸ-ಭಾರತೀಯ ಸೇನೆಯ ದಾಳಿಗೆ ಎಂಟು ಪಾಕ್ ಸೈನಿಕರು ಸಾವು
ಪಾಕ್ ಸೇನೆಯ ಬಂಕರ್, ತೈಲಾಗಾರ ಹಾಗೂ ಸೇನೆಯ ಲಾಂಚ್ ಪ್ಯಾಡ್ ಅನ್ನು ಧ್ವಂಸಗೊಳಿಸಲಾಗಿದೆ
Team Udayavani, Nov 13, 2020, 5:29 PM IST
ನವದೆಹಲಿ/ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸಮೀಪ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ದಾಳಿಗೆ ಎಂಟು ಮಂದಿ ಉಗ್ರರು ಸಾವನ್ನಪ್ಪಿರುವ ಘಟನೆ ಶುಕ್ರವಾರ(ನವೆಂಬರ್ 13, 2020) ನಡೆದಿದೆ.
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಇಂದು ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿತ್ತು ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಎಎನ್ ಐ ನ್ಯೂಸ್ ಏಜೆನ್ಸಿ ಪ್ರಕಾರ, ಭಾರತೀಯ ಯೋಧರು ನಡೆಸಿದ ಪ್ರತಿದಾಳಿಗೆ ಪಾಕಿಸ್ತಾನ ಸೇನೆಯ 2,3 ಸ್ಪೆಷಲ್ ಸರ್ವೀಸ್ ಗ್ರೂಪ್ ನ ಕಮಾಂಡೋಸ್ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ಭಾರತೀಯ ಯೋಧರ ಮೇಲಿನ ದಾಳಿ ಹಾಗೂ ನಾಗರಿಕರ ಮೇಲೆ ನಡೆಸಿದ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯ ದಾಳಿಗೆ ಹಲವಾರು ಪಾಕಿಸ್ತಾನಿ ಯೋಧರು ಗಾಯಗೊಂಡಿದ್ದು, ಪಾಕ್ ಸೇನೆಯ ಬಂಕರ್, ತೈಲಾಗಾರ ಹಾಗೂ ಸೇನೆಯ ಲಾಂಚ್ ಪ್ಯಾಡ್ ಅನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
ಇದನ್ನೂ ಓದಿ:11 ಮತಗಳ ಅಂತರದಿಂದ ಅರಿಜೊನಾ ಗೆದ್ದ ಬೈಡೆನ್: ಕೊನೆಗೂ ಅಭಿನಂದನೆ ಸಲ್ಲಿಸಿದ ಚೀನಾ
ಪಾಕ್ ಪಡೆಯ ದಾಳಿಗೆ ನಾಲ್ವರು ಭಾರತೀಯ ಯೋಧರು ಹುತಾತ್ಮ:
ಜಮ್ಮು-ಕಾಶ್ಮೀರದ ಗಡಿನಿಯಂತ್ರಣ ಪ್ರದೇಶದ ಸಮೀಪ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮೂವರು ನಾಗರಿಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ(ನವೆಂಬರ್ 13, 2020) ನಡೆದಿತ್ತು.
ಬಾರಾಮುಲ್ಲಾ ಜಿಲ್ಲೆಯ ನಂಬ್ಲಾ ಸೆಕ್ಟರ್ ಸಮೀಪದ ಪಾಕ್ ಪಡೆ ಕದನ ವಿರಾಮ ಉಲ್ಲಂಘಿಸಿ ಮೋರ್ಟಾರ್ಸ್ ಹಾಗೂ ಶೆಲ್ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು.
ಕುಪ್ವಾರಾ ಗಡಿ ನಿಯಂತ್ರಣ ರೇಖೆ ಸಮೀಪ ಗಡಿ ಭದ್ರತಾ ಪಡೆ(ಬಿಎಸ್ ಎಫ್) ಸಬ್ ಇನ್ಸ್ ಪೆಕ್ಟರ್ ಹುತಾತ್ಮಾರಾಗಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಕಮಲ್ ಕೋಟೆ ಸೆಕ್ಟರ್ ಪ್ರದೇಶದಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.