ಕಣಿವೆಯಲ್ಲಿ ಬಿಜೆಪಿ ಪುರಪ್ರವೇಶ; ಕಾಶ್ಮೀರದಲ್ಲಿ ಮೂರು ಸ್ಥಾನ ಗೆದ್ದ ಕೇಸರಿ ಪಕ್ಷ
ಬಿಜೆಪಿ 75, ಕಾಂಗ್ರೆಸ್ 24, ಅಪ್ನಿ ಪಾರ್ಟಿ 10, ಇತರರು 66 ಕ್ಷೇತ್ರಗಳಲ್ಲಿ ಮುಂದಿವೆ.
Team Udayavani, Dec 23, 2020, 10:47 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆಕಾಶ್ಮೀರದಲ್ಲಿ ಬಿಜೆಪಿ ಖಾತೆ ತೆರೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಶ್ಮೀರದಲ್ಲಿ ಕೇಸರಿ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಕ್‌ಪೋರಾದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ಹಾ ಲತೀಫ್, ಖೋನ್‌ಮೋಹ್ 2ನಲ್ಲಿ ಇಜಾಜ್ ಹುಸೇನ್, ತುಲೈಲ್ ಕ್ಷೇತ್ರದಲ್ಲಿ ಇಜಾಜ್ ಅಹ್ಮದ್ ಖಾನ್ ಜಯಭೇರಿ ಬಾರಿಸಿದ್ದಾರೆ. ಒಟ್ಟು 280ಕ್ಷೇತ್ರಗಳ ಪೈಕಿ ನ್ಯಾಷನಲ್‌ಕಾನ್ಫರೆನ್ಸ್ ವರಿಷ್ಠ ಫಾರೂಕ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಪಿಎಜಿಡಿ)103 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ 75, ಕಾಂಗ್ರೆಸ್ 24, ಅಪ್ನಿ ಪಾರ್ಟಿ 10, ಇತರರು 66 ಕ್ಷೇತ್ರಗಳಲ್ಲಿ ಮುಂದಿವೆ.
ಜಮ್ಮು ಪ್ರಾಂತ್ಯದಲ್ಲಿ, ಬಿಜೆಪಿಯು 73 ಸೀಟುಗಳ ಮುನ್ನಡೆ ಕಾಯ್ದುಕೊಂಡಿದ್ದರೆ, ಗುಪ್ಕಾರ್ ಮೈತ್ರಿ 37 ರಲ್ಲಿ ಗೆಲುವು ಸಾಧಿಸಿದೆ. ಕಾಶ್ಮೀರದಲ್ಲಿ, ಗುಪ್ಕಾರ್
ಬರೋಬ್ಬರಿ 71 ಸೀಟುಗಳಲ್ಲಿ ಮುಂದಿದ್ದು, ಬಿಜೆಪಿ 3 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. 25 ದಿನಗಳ ಅವಧಿಯಲ್ಲಿ 280 ಕ್ಷೇತ್ರಗಳಿಗೆ 8 ಹಂತಗಳಲ್ಲಿ ಯಾವುದೇ ಹಿಂಸಾಚಾರ ಇಲ್ಲದೇ ಮತದಾನ ನಡೆದಿತ್ತು.
ಇದನ್ನೂ ಓದಿ:ಕಡಿಮೆ ಬೆಲೆಯ ಹೊಸಕಾರು; ನಿಸಾನ್ ಮ್ಯಾಗ್ನೆಟ್
ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆಯ ಮತ ಎಣಿಕೆಗೂ ಮುನ್ನ ಹಲವಾರು ಪಿಡಿಪಿ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಇದರಲ್ಲಿ ನ್ಯಾಶನಲ್ ಕಾನ್ಫರೆನ್ಸ್ ನ ನಯೀಂ ಅಖ್ತರ್, ಸರ್ಜಾಜ್ ಮದನಿ, ಪೀರ್ ಮನ್ಸೂರ್ ಮತ್ತು ಹಿಲಾಲ್ ಅಹ್ಮದ್ ಲೋನ್ ಅವರನ್ನು ಕೂಡಾ ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಪ್ರಧಾನಿ ಮೋದಿ ಅವರ ನವ ಕಾಶ್ಮೀರ, ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾವಿಶ್ವಾಸ್ ಪರಿಕಲ್ಪನೆಯ ಮೇಲೆ ಕಾಶ್ಮೀರದ ಜನರುವಿಶ್ವಾಸವಿರಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಿರುವುದು ಸ್ಪಷ್ಟವಾಗಿದೆ.
●ವಿಬೋಧ್ ಗುಪ್ತಾ,
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.