ದಾಳಿ ಯತ್ನ ವಿಫಲ: ಕುಲ್ಗಾಮ್ ನಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಗೆ ಪಾಕ್ ಉಗ್ರ ಬಲಿ
ಘಟನಾ ಸ್ಥಳದಲ್ಲಿ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ಮಾಹಿತಿ ನೀಡಿದ್ದಾರೆ.
Team Udayavani, Aug 13, 2021, 3:55 PM IST
ಕಾಶ್ಮೀರ: ಉಗ್ರರ ವಿರುದ್ಧ ಇಡೀ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಉಗ್ರನೊಬ್ಬ ಹತ್ಯೆಗೀಡಾಗಿರುವ ಘಟನೆ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮೀರ್ ಬಜಾರ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಜರ್ಮನಿ ಚಿತ್ರೋತ್ಸವದಲ್ಲಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಪ್ರಶಸ್ತಿ
ಭದ್ರತಾ ಪಡೆಯ ಎನ್ ಕೌಂಟರ್ ಗೆ ಪಾಕಿಸ್ತಾನದ ಭಯೋತ್ಪಾದಕ ಉಸ್ಮಾನ್ ಎಂಬಾತ ಹತ್ಯೆಗೀಡಾಗಿರುವುದಾಗಿ ಸೇನಾ ಮೂಲಗಳು ಹೇಳಿವೆ. ಸಾವಿಗೀಡಾಗಿರುವ ಉಗ್ರನ ಬಗ್ಗೆ ಹೆಚ್ಚಿನ ವಿವರಣೆ ನೀಡಲಾಗುವುದು ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಕಟ್ಟಡದೊಳಗೆ ಅಡಗಿ ಕುಳಿತು ಗುಂಡಿನ ದಾಳಿ ನಡೆಸುತ್ತಿರುವ ಉಗ್ರರ ಕುರಿತು ಬಿಎಸ್ ಎಫ್ ಗೆ ಮಾಹಿತಿ ನೀಡಲಾಗಿದ್ದು, ಉಗ್ರರು ಸತತವಾಗಿ ಗುಂಡಿನ ದಾಳಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಭದ್ರತಾ ಪಡೆ ಸ್ಥಳವನ್ನು ಸುತ್ತುವರಿದಾಗ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಉಗ್ರರ ವಿರುದ್ಧ ದಾಳಿ ನಡೆಸಿದ ಪರಿಣಾಮ ಭಯೋತ್ಪಾದಕರ ದಾಳಿಯ ಸಂಚನ್ನು ವಿಫಲಗೊಳಿಸಿದಂತಾಗಿದೆ. ಘಟನಾ ಸ್ಥಳದಲ್ಲಿ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.