ಶ್ರೀನಗರದಲ್ಲಿ ಉಗ್ರರ ದಾಳಿ: ಓರ್ವ ಜವಾನ ಹುತಾತ್ಮ, ಇಬ್ಬರು ಗಂಭೀರ
Team Udayavani, Jun 24, 2017, 7:08 PM IST
ಹೊಸದಿಲ್ಲಿ : ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪಂಥಾ ಚೌಕ್ ಪ್ರದೇಶದಲ್ಲಿ ಇಂದು ಸಂಜೆ ಭಾರೀ ಶಸ್ತ್ರ ಸಜ್ಜಿತ ಉಗ್ರರು ಸಿಆರ್‌ಪಿಎಫ್ ಗಸ್ತು ವಾಹನದ ಮೇಲೆ ಹೊಂಚು ದಾಳಿ ನಡೆಸಿದ ಪರಿಣಾಮವಾಗಿ ಓರ್ವ ಜವಾನ ಹುತಾತ್ಮನಾಗಿ ಇತರ ಇಬ್ಬರು ಜವಾನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಎಕೆ ರೈಫಲ್‌ಗಳನ್ನು ಹೊಂದಿದ್ದ ಭಾರೀ ಶಸ್ತ್ರ ಸಜ್ಜಿತ ಉಗ್ರರು 29 ಬೆಟಾಲಿಯನ್ ಸಿಆರ್‌ಪಿಎಫ್ ಗೆ ಸೇರಿದ ಗಸ್ತು ವಾಹನ ಮೇಲೆ ಇಂದು ಸಂಜೆ 6.15ರ ಹೊತ್ತಿಗೆ ಉಗ್ರರು ಯದ್ವಾತದ್ವಾ ಗುಂಡು ಹಾರಿಸಿದರು. ಶ್ರೀನಗರದಲ್ಲಿನ ಪಂಥಾ ಚೌಕ್ ಬಸ್ ನಿಲ್ದಾಣದ ಸಮೀಪ ಈ ದಾಳಿ ನಡೆಯಿತು. ಉಗ್ರರ ದಾಳಿಯಲ್ಲಿ ಇಬ್ಬರು ಜವಾನರು ಗಂಭೀರವಾಗಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳು ಜವಾನನ್ನು ಬದಾಮಿಬಾಗ್‌ನಲ್ಲಿನ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹುತಾತ್ಮನಾದ ಜವಾನನನ್ನು ಸಬ್ ಇನ್ಸ್‌ಪೆಕ್ಟರ್ ಸಾಹಬ್ ಶುಕ್ಲಾ ಎಂದು ಗುರುತಿಸಲಾಗಿದೆ.
ದಾಳಿಯ ಬಳಿಕ ಅಡಗಿಕೊಂಡಿರುವ ಉಗ್ರರನ್ನು ಪತ್ತೆ ಹಚ್ಚಲು ಪೊಲೀಸರು, ಅರೆ ಸೈನಿಕ ದಳದ ಸಿಬಂದಿಗಳು ಹಾಗೂ ಭದ್ರತಾ ಪಡೆಗಳು ಇಡಿಯ ಪ್ರದೇಶವನ್ನು ಸುತ್ತುವರಿದಿದ್ದು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ಶ್ರೀನಗರ – ಜಮ್ಮು ನ್ಯಾಶನಲ್ ಹೈವೇ ಯನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.