ಜಾರ್ಖಂಡ್ 11ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಪ್ರಮಾಣವಚನ ಸ್ವೀಕಾರ
Team Udayavani, Dec 29, 2019, 3:11 PM IST
ಜಾರ್ಖಂಡ್: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ದ ನಾಯಕ ಹೇಮಂತ್ ಸೋರೆನ್ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ರಾಂಚಿಯ ಮೋಹ್ರಾಬಡಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ದ್ರೌಪದಿ ಮುರ್ಮು ಹೇಮಂತ್ ಸೋರೆನ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಚತ್ತೀಸ್ ಗಢ್ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್ ಜೆಡಿ ಕಾರ್ಯಾಧ್ಯಕ್ಷ ತೇಜಸ್ವಿ ಯಾದವ್, ಜೆಎಂಎಂ ಅಧ್ಯಕ್ಷ, ಹೇಮಂತ್ ಸೋರೆನ್ ತಂದೆ ಶಿಬು ಸೋರೆನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.