Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬರ್ಹೈತ್‌ನಿಂದ ಹೇಮಂತ್ ಸೊರೇನ್ ,ಪತ್ನಿ, ಸಹೋದರ ಕಣಕ್ಕೆ
Team Udayavani, Oct 23, 2024, 11:31 AM IST
ರಾಂಚಿ: ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ತನ್ನ 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಬರ್ಹೈತ್‌ನಿಂದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಗಂಡೇ ಕ್ಷೇತ್ರದಿಂದ ಕಲ್ಪನಾ ಸೊರೇನ್ ಅವರನ್ನು ಕಣಕ್ಕಿಳಿಸಿದೆ.
ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೈತ್ (ಎಸ್‌ಟಿ) ಕ್ಷೇತ್ರದ ಹಾಲಿ ಶಾಸಕ ಹೇಮಂತ್ ಸೊರೇನ್ 2019 ರ ವಿಧಾನಸಭಾ ಚುನಾವಣೆಯಲ್ಲಿ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಸೈಮನ್ ಮಾಲ್ಟೊ ಅವರ ವಿರುದ್ಧ 25,740 ಮತಗಳಿಂದ ಗೆದ್ದಿದ್ದರು.ರ ಪತ್ನಿ ಕಲ್ಪನಾ ಬಿಜೆಪಿ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ ವರ್ಮಾ ವಿರುದ್ಧ 27,149 ಮತಗಳಿಂದ ಗಂಡೇ ಉಪಚುನಾವಣೆಯಲ್ಲಿ ಜಯಗಳಿಸಿದ್ದರು.
ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
35 ಜೆಎಂಎಂ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿಯ ಸಹೋದರ ಬಸಂತ್ ಸೊರೇನ್ ದುಮ್ಕಾದಿಂದ, ಜಾರ್ಖಂಡ್ ವಿಧಾನಸಭಾ ಸ್ಪೀಕರ್ ರವೀಂದ್ರನಾಥ್ ಮಹತೋ ನಾಲಾದಿಂದ, ಸಚಿವ ಮಿಥಿಲೇಶ್ ಠಾಕೂರ್ ಗರ್ವಾದಿಂದ, ಸೋನು ಸುದಿವ್ಯಾ ಗಿರಿದಿಹ್ ಮತ್ತು ಬೇಬಿ ದೇವಿ ಡುಮ್ರಿಯಿಂದ ಸ್ಪರ್ಧಿಸಲಿದ್ದಾರೆ.
JMM ಘೋಷಿಸಿದ ಇತರ ಅಭ್ಯರ್ಥಿಗಳ ಪೈಕಿ ಚೈಬಾಸಾದಿಂದ ದೀಪಕ್ ಬಿರುವಾ ಮತ್ತು ಜಮುವಾದಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿಯ ಮೂರು ಅವಧಿಯ ಹಾಲಿ ಶಾಸಕ ಕೇದರ್ ಹಜಾರಾ ಕೂಡ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.