ಜೆಎನ್ ಯುನಲ್ಲಿ ಮತ್ತೆ ಘರ್ಷಣೆ : ಹಲವು ವಿದ್ಯಾರ್ಥಿಗಳಿಗೆ ಗಾಯ
Team Udayavani, Aug 22, 2022, 8:04 PM IST
ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್ಗಳ ನಡುವಿನ ಘರ್ಷಣೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳ ಗುಂಪು ಇಂದು ಎರಡು ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಶಾಂತಿಯುತವಾಗಿ ಒತ್ತಾಯಿಸುತ್ತಿರುವಾಗ ಸಂಸ್ಥೆಯಲ್ಲಿ ನಿಯೋಜಿತರಾಗಿದ್ದ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿ ವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ ಐದು ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ಹೋಗಿದ್ದರು ಎಂದು ಎಬಿವಿಪಿ ಜೆಎನ್ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದ್ದು, ಸಿಬ್ಬಂದಿ, ವಿದ್ಯಾರ್ಥಿಗಳನ್ನು ನಿಂದಿಸಿದರು ಮತ್ತು ಅವರೊಂದಿಗೆ ಅನುಚಿತವಾಗಿ ವರ್ತಿಸಿದರು. ಈ ಹಿಂದೆ 17 ಸಿಬ್ಬಂದಿ ಇದ್ದರು ಈಗ ಕೇವಲ ನಾಲ್ವರು ಇದ್ದಾರೆ. ವಿದ್ಯಾರ್ಥಿಗಳು ಈಗ ಎರಡು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಸ್ಥಳದಿಂದ ಬಂದ ದೃಶ್ಯಗಳಲ್ಲಿ ಸಮವಸ್ತ್ರಧಾರಿ ಭದ್ರತಾ ಸಿಬ್ಬಂದಿಗಳು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಗುಂಪನ್ನು ತಳ್ಳುವ ಮತ್ತು ತಡೆಯಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಕೆಲವು ವಿಡಿಯೋಗಳಲ್ಲಿ ನೆಲದ ಮೇಲೆ ರಕ್ತದ ಕಲೆಗಳು, ಡಸ್ಟ್ಬಿನ್ಗಳಲ್ಲಿ ರಕ್ತಸಿಕ್ತ ಡ್ರೆಸ್ಸಿಂಗ್ ಮತ್ತು ನೆಲದ ಮೇಲೆ ಚದುರಿದ ಗಾಜುಗಳನ್ನು ತೋರಿಸುತ್ತಿವೆ.
ಹಲವಾರು ವಿದ್ಯಾರ್ಥಿಗಳು, ತಮ್ಮ ಗಾಯಗಳನ್ನು ಪ್ರದರ್ಶಿಸುತ್ತಾ, ತಮ್ಮನ್ನು ಭದ್ರತಾಸಿಬ್ಬಂದಿಗಳು ಟಾರ್ಗೆಟ್ ಮಾಡಿದ್ದಾರೆ ಮತ್ತು ತೀವ್ರವಾಗಿ ಗಾಯಗೊಂಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.