ದೆಹಲಿ ಲಾಕ್ ಡೌನ್ ಹಿನ್ನೆಲೆ JNU ನಲ್ಲಿ ಬಿಗಿ ಕ್ರಮ ಜಾರಿ

Team Udayavani, Apr 20, 2021, 2:28 PM IST

NU issues strict guidelines inside campus for week-long lockdown

ನವ ದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಸೋಂಕಿನ ಹಠಾತ್ ಏರಿಕೆಯ ಕಾರಣದಿಂದಾಗಿ ನಿನ್ನೆ(ಸೋಮವಾರ, ಏ. 19) ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಂದು ವಾರಗಳ ಲಾಕ್ ಡೌನ್ ಘೋಷಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ಲಾಕ್ ಡೌನ್ ಹೇರಿಕೆಯಾದ ಬೆನ್ನಲ್ಲೆ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದಲ್ಲೂ ಕೂಡ ವಿಶೇಷ ಕೋವಿಡ್ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ವಿಶ್ವ  ವಿದ್ಯಾಲಯದ ಕ್ಯಾಂಪಸ್ ನೊಳಗೆ ಇರುವ ಎಲ್ಲಾ ಉಪಹಾರ ಗ್ರಹಗಳಲ್ಲಿ ಕೂತು ಉಪಹಾರ ಸೇವಿಸುವುದಕ್ಕೆ ಅವಕಾಶವಿಲ್ಲ, ಪಾರ್ಸೆಲ್ ಗೆ ಹಾಗೂ ಹೋಮ್ ಡೆಲಿವರಿಗೆ ಅವಕಾಶವನ್ನು ನೀಡಿ ಆದೇಶ ಹೊರಡಿಸಿದೆ.

ಓದಿ : ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಮುಸ್ಲೀಂ ಸಹೋದರರು!

ವಸತಿ ನಿಲಯಗಳು, ಹಾಸ್ಟೆಲ್ ಗಳಿಗೆ ಕಟ್ಟು ನಿಟ್ಟಾದ ನಿಯಮಗಳನ್ನು ಹೊರಡಿಸಿದ್ದು, ಒಂದು ಹಾಸ್ಟೆಲ್ ನಿಂದ ಇನ್ನೊಂದು ಹಾಸ್ಟೆಲ್ ಗೆ ಪ್ರವೇಶಿಸುವಂತಿಲ್ಲ ಎಂದು ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ವಿಶ್ವವಿದ್ಯಾಲಯ ತಿಳಿಸಿದೆ.

ಕ್ರೀಡಾಂಗಣ ಅಥವಾ ರಸ್ತೆಯಲ್ಲಿ ವಾಕಿಂಗ್, ಓಟ, ಅಥವಾ ಜಾಗಿಂಗ್ ಜೊತೆಗೆ ಕ್ಯಾಂಪಸ್‌ ನಲ್ಲಿ ಯಾವುದೇ ಸಾಮೂಹಿಕ ಸಭೆ ನಿಷೇಧಿಸಲಾಗಿದೆ.

ಸೋಮವಾರ, ವಾರ್ಸಿಟಿ ಕೇಂದ್ರ ಗ್ರಂಥಾಲಯವನ್ನು ವಾರದ ಲಾಕ್‌ ಡೌನ್ ಅವಧಿಯವರೆಗೆ ಮುಚ್ಚುವಂತೆ ಘೋಷಿಸಿದೆ.

ಮಾನ್ಯತೆ ಹೊಂದಿರುವ ಗುರುತಿನ ಚೀಟಿಯ ಾಧಾರದ ಮೇಲೆ ಕರ್ಫ್ಯೂ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳು, ವೈದ್ಯಕೀಯ ತುರ್ತುಸ್ಥಿತಿ ಮತ್ತು ಸರಕುಗಳ ಪೂರೈಕೆಗಾಗಿ ತೊಡಗಿರುವವರಿಗೆ ಮಾತ್ರ ಓಡಾಟಕ್ಕೆ ಅನುಮತಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಗೆ ವಿಶ್ವವಿದ್ಯಾಲಯ ತಿಳಿಸಿದೆ.

ಇನ್ನು, ಭದ್ರತೆ ಮತ್ತು ಸಾರಿಗೆ, ವಿಶ್ವವಿದ್ಯಾಲಯ ಆರೋಗ್ಯ ಕೇಂದ್ರ, ಶೈಕ್ಷಣಿಕ ಶಾಖೆ, ಆಡಳಿತ ಶಾಖೆ, ಹಣಕಾಸು ವಿಭಾಗಗಳು, ಎಂಜಿನಿಯರಿಂಗ್ (ವಿದ್ಯುತ್ / ಸಿವಿಲ್), ನೈರ್ಮಲ್ಯ, ಸಂವಹನ ಮತ್ತು ಮಾಹಿತಿ ಸೇವೆಗಳು ಮತ್ತು ಕೇಂದ್ರ ಪ್ರಯೋಗಾಲಯದ ಪ್ರಾಣಿ ಸಂಶೋಧನೆ ಸೇರಿದಂತೆ ಅಗತ್ಯ ಸೇವಾ ವಿಭಾಗಗಳು ಈ ಅವಧಿಯಲ್ಲಿ ಕಾರ್ಯನಿರ್ವಹಿಸಲಿವೆ.

“ಕೋವಿಡ್ ಸೋಂಕು ನಿಯಂತ್ರಣ ಮಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್ ನ್ನು ಹಾಕಲು” ಭದ್ರತಾ ಸಿಬ್ಬಂದಿಗೆ ವಿಶ್ವ ವಿದ್ಯಾಲಯ ಸೂಚನೆ ನೀಡಿದೆ.

ಓದಿ : ಪೇಟಿಎಂ ನೊಂದಿಗೆ ಎಲ್ ಐ ಸಿ ಒಪ್ಪಂದ..! ಮುಂದಿನ ಯೋಜನೆ ಏನು..?

ಟಾಪ್ ನ್ಯೂಸ್

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.