EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Team Udayavani, Nov 27, 2024, 6:25 AM IST
ನವದೆಹಲಿ: ಇವಿಎಂ (ವಿದ್ಯುನ್ಮಾನ ಮತಯಂತ್ರ) ರದ್ದುಗೊಳಿಸಿ ಮತ ಪತ್ರ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಮಾದರಿ ಯಾತ್ರೆ ಕೈಗೊಳ್ಳಲಾಗುತ್ತದೆ. ಹೀಗೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ತಾಲ್ಕಟೋರ ಸ್ಟೇಡಿಯಂನಲ್ಲಿ ಸಂವಿಧಾನ ರಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವಿಎಂಗಳನ್ನು ತಿರುಚಲಾಗುತ್ತಿದೆ. ಎಸ್ಟಿ, ಎಸ್ಟಿ, ಒಬಿಸಿ ಹಾಗೂ ಬಡ ಸಮುದಾಯಗಳ ಮತಗಳು ನೀರಿನಲ್ಲಿ ಹೋಮವಾಗುತ್ತಿದೆ. ಹೀಗಾಗಿ, ಹಿಂದಿನಂತೆಯೇ ಮತ ಪತ್ರ ವ್ಯವಸ್ಥೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
“ನಮಗೆ ಇವಿಎಂ ಬೇಡ, ಮತ ಪತ್ರ ಬೇಕು. ಇವಿಎಂ ಗಳನ್ನು ಬೇಕಾ ದರೆ ಮೋದಿ ಹಾಗೂ ಅಮಿತ್ ಶಾ ಮನೆಯಲ್ಲಿ ಇಟ್ಟುಕೊಳ್ಳಲಿ ಆಗ ಅವರ ಬಂಡವಾಳ ಬಯಲಾಗುತ್ತದೆ ಎಂದಿದ್ದಾರೆ.
ಬಿಜೆಪಿ ಕಿಡಿ: ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದ್ದು, ಕಾಂಗ್ರೆಸ್ ಗೆದ್ದರೆ ಮಾತ್ರ ಇವಿಎಂ ಸರಿ, ಇಲ್ಲದಿದ್ದರೆ ಇವಿಎಂ ಸರಿ ಇಲ್ಲ ಎಂಬುದು ಕಾಂಗ್ರೆಸ್‌ನ ಧೋರಣೆ. ಇವಿಎಂ ಅಂದರೆ ಅವರ ಪಾಲಿಗೆ ಎಕ್ಸ್‌ಕ್ಯೂಸ್ ಫಾರ್ ವೋಟಿಂಗ್ ಮಾರ್ಜಿನ್ ಎಂಬಂತಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.