ರೇಪ್: ತೆಹೆಲ್ಕಾ ಪತ್ರಕರ್ತ ವಿರುದ್ಧ ಆರೋಪ ನಿಗದಿ
Team Udayavani, Sep 29, 2017, 7:10 AM IST
ಪಣಜಿ: ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಮಾಪುಸಾ ಜಿಲ್ಲಾ ಕೋರ್ಟ್ ತೆಹೆಲ್ಕಾ ಮ್ಯಾಗಜಿನ್ನ ಸ್ಥಾಪಕ, ಪತ್ರಕರ್ತ ತರುಣ್ ತೇಜ್ಪಾಲ್ ವಿರುದ್ಧ ಆರೋಪಪಟ್ಟಿ ನಿಗದಿ ಮಾಡಿದೆ.
ತೆಹೆಲ್ಕಾದ ಮಾಜಿ ಸಂಪಾದಕನ ವಿರುದ್ಧ ಲೈಂಗಿಕ ಕಿರುಕುಳ, ಉನ್ನತ ಹುದ್ದೆಯಲ್ಲಿದ್ದುಕೊಂಡು ಮಹಿಳೆಯ ಮೇಲೆ ನಿಯಂತ್ರಣ ಸಾಧಿಸಿದ್ದು ಸೇರಿ ಹಲವು ಗುರುತರ ಆರೋಪಗಳನ್ನು ಹೊರಿಸಲಾಗಿದೆ. ಆದರೆ ತರುಣ್ ತೇಜ್ಪಾಲ್ ತಾನು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಕೋರ್ಟ್ಗೆ ಅರಿಕೆ ಮಾಡಿಕೊಂಡಿದ್ದಾರೆ.
ಉನ್ನತ ಹುದ್ದೆಯಲ್ಲಿದ್ದುಕೊಂಡು ಅದನ್ನು ದುರುಪಯೋಗಪಡಿಸಿ ಅತ್ಯಾಚಾರವೆ ಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೋವಾದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಜಿಲ್ಲಾ ಕೋರ್ಟ್ ನ್ಯಾಯಾಧೀಶ ವಿಜಯ ಪೋಲ್ ಮುಂದಿನ ವಿಚಾರಣೆಯನ್ನು ನ.21ಕ್ಕೆ ಮುಂದೂಡಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಫ್ರಾನ್ಸಿಸ್ಕೋ ತವೋರಾ ಹೇಳಿದ್ದಾರೆ. ಒಂದು ವೇಳೆ ತೇಜ್ಪಾಲ್ ವಿರುದ್ಧದ ಆರೋಪ ಸಾಬೀತಾದರೆ ಕನಿಷ್ಠ ಹತ್ತು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆರೋಪ ನಿಗದಿ ಮಾಡುವ ಪ್ರಕ್ರಿಯೆಗೆ ಅನುಮತಿ ನೀಡಿದ ನ್ಯಾಯಾಧೀಶರು, ಹಿಂದಿನ ವಿಚಾರಣೆ ವೇಳೆಯೇ ಆರೋಪಪಟ್ಟಿ ಆಪಾದಿತರ ಮೇಲೆ ಹೊರಿಸಲಾಗಿದೆ.
ಗುರುವಾರ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಅದನ್ನು ವಿವರಿಸಲಾಗುತ್ತದೆ ಎಂದರು. ಇನ್ನು ಬಾಂಬೆ ಹೈಕೋರ್ಟ್ ಕೂಡ ಪ್ರಕರಣದ ವಿಚಾರಣೆಯನ್ನು ನ.1ಕ್ಕೆ ಮುಂದೂಡಿದೆ ಎಂದರು ನ್ಯಾಯಾಧೀಶ ರಾಜೀವ್ ಗೋಮ್ಸ್. 2013ರಲ್ಲಿ ಗೋವಾದ ಪಂಚತಾರಾ ಹೊಟೇಲ್ ಒಂದರ ಎಲಿವೇಟರ್ನಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದರು ಎಂದು ಕೇಸು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.