Jr NTR ಅಭಿಮಾನಿ ಆತ್ಮಹತ್ಯೆ: ಆಂಧ್ರದಲ್ಲಿ ರಾಜಕೀಯ ತಿರುವು ಪಡೆದುಕೊಂಡ ಶ್ಯಾಮ್‌ ಪ್ರಕರಣ


Team Udayavani, Jun 27, 2023, 4:09 PM IST

TDY-18

ಹೈದರಾಬಾದ್: ಟಾಲಿವುಡ್‌ ನಟ ಜೂ.ಎನ್‌ಟಿಆರ್ ಅವರ ಅಭಿಮಾನಿಯೊಬ್ಬನ ಆತ್ಮಹತ್ಯೆ ಪ್ರಕರಣ ಆಂಧ್ರ ಪ್ರದೇಶದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ.

ಜೂ.ಎನ್‌ಟಿಆರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಶ್ಯಾಮ್ (20) ಭಾನುವಾರ ಆಂಧ್ರಪ್ರದೇಶದ ಕೋನಸೀಮಾದಲ್ಲಿನ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಆದರೆ ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಕೆಲ ಟಿಡಿಪಿ ನಾಯಕರು ಶ್ಯಾಮ್ ಅವರ ಸಾವು ಆತ್ಮಹತ್ಯೆಯಿಂದ ಆದದ್ದಲ್ಲ, ಅದೊಂದು ವ್ಯವಸ್ಥಿತ ಕೊಲೆ. ಇದರಲ್ಲಿ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಇಜಿ ಜಿಲ್ಲೆಯ ಚಿಂತಲೂರಿನಲ್ಲಿ ಶ್ಯಾಮ್ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಸಾವಿನ ಸುತ್ತ ಹಲವು ಅನುಮಾನಗಳು ಕೇಳಿ ಬರುತ್ತಿದೆ. ಇದರಲ್ಲಿ ವೈಎಸ್‌ಆರ್‌ಸಿಪಿ ಸದಸ್ಯರು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯದ ಬಗ್ಗೆ ಕೂಲಂಕಷ ತನಿಖೆ ನಡೆಸಿ, ನ್ಯಾಯ ಸಿಗುವಂತೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು” ಘಟನೆ ಬಗ್ಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಗ್‌ಜಿನ್‌ಗಾಗಿ ತಂದೆ ಜೊತೆಯೇ ಲಿಪ್‌ ಲಾಕ್‌ ಮಾಡಿದ್ದ ನಟಿ: ಪೂಜಾ ಭಟ್‌ ವಿವಾದಗಳೇನು?

ಆದರೆ ಪೊಲೀಸರು ಆರೋಪಗಳನ್ನು ತಳ್ಳಿ ಹಾಕಿದ್ದು,  ಶ್ಯಾಮ್ ಎಂಬ 20 ವರ್ಷದ ಯುವಕ ಎರಡು ದಿನಗಳ ಹಿಂದೆ (ಜೂನ್ 25) ಬೆಳಿಗ್ಗೆ ಕೋನಸೀಮಾ ಜಿಲ್ಲೆಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ತನಿಖೆ ನಡೆಸಿದ್ದಾರೆ. ನಮ್ಮ ಪ್ರಾಥಮಿಕ ತನಿಖೆಯಲ್ಲಿಇದು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಲಾಗಿದೆ ಎಂದು ಕೋನಸೀಮಾ ಪೊಲೀಸ್‌ ಅಧಿಕಾರಿ ಪಿ ಶ್ರೀಧರ್ ಹೇಳಿದ್ದಾರೆ.

ಶ್ಯಾಮ್‌ ಮೊದಲು ಬ್ಲೇಡ್‌ನಿಂದ ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದಾನೆ. ಆತನ ಜೇಬಿನಲ್ಲಿ ಬ್ಲೇಡ್‌ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನೇಣು ಬಿಗಿದುಕೊಂಡು ಸಾವು ಸಂಭವಿಸಿದೆ ಎಂದು ಶವಪರೀಕ್ಷೆ ವರದಿ ತೋರಿಸಿದೆ ಎಂದು ಪಿ ಶ್ರೀಧರ್ ಹೇಳಿದ್ದಾರೆ.

ಇದಲ್ಲದೇ ಶ್ಯಾಮ್‌ ಪ್ರೀತಿಯಲ್ಲಿದ್ದ. ಕಲಿಯುವದರಲ್ಲಿಯೂ ತುಂಬಾ ದುರ್ಬಲನಾಗಿದ್ದ. ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಕ ತನಿಖೆಯಲ್ಲಿ ತಿಳಿದು ಬಂದಿದೆ. ವೈಎಸ್‌ಆರ್‌ಸಿಪಿ ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ಅವರು ಹೇಳಿದ್ದಾರೆ.

ಸದ್ಯ ಶ್ಯಾಮ್‌ ಅವರಿಗೆ ನ್ಯಾಯ ಸಿಗಬೇಕೆಂದು ಟ್ವಿಟರ್‌ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ಜೂ.ಎನ್‌ ಟಿಆರ್‌ ಅಬಿಮಾನಿಗಳ ಶ್ಯಾಮ್‌ ಅವರು ತನ್ನ ನೆಚ್ಚಿನ ನಟನನ್ನು ಭೇಟಿಯಾದ ಪೋಟೋವನ್ನು ಹಾಕಿ ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.