370 ವಿಧಿ ರದ್ದು: ಕಾಂಗ್ರೆಸ್‌ನಲ್ಲೇ ಒಡಕು!
ರದ್ದತಿ ಪರ ಜ್ಯೋತಿರಾದಿತ್ಯ ಸಿಂಧಿಯಾ ಬ್ಯಾಟಿಂಗ್
Team Udayavani, Aug 6, 2019, 8:07 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಕುರಿತಾಗಿ ಈಗ ಕಾಂಗ್ರೆಸ್‌ನಲ್ಲಿ ಒಡಕು ಇನ್ನಷ್ಟು ದೊಡ್ಡದಾಗಿದೆ. ಕಾಂಗ್ರೆಸ್‌ನ ಪ್ರಮುಖ ನೇತಾರ, ಕಾಂಗ್ರೆಸ್‌ನ ಪರಮೋತ್ಛ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಅವರೇ 370 ರದ್ದತಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲಯನಗೊಳಿಸುವ 370 ರದ್ದತಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಈ ರದ್ದತಿ ವೇಳೆ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪಾಲಿಸಬೇಕಿತ್ತು. ಇದರಿಂದ ಯಾರೂ ಬಳಿಕ ಪ್ರಶ್ನೆಗಳನ್ನೇ ಕೇಳುತ್ತಿರಲಿಲ್ಲ. ಆದಾಗ್ಯೂ ಇದು ನಮ್ಮ ದೇಶದ ಹಿತಾಸಕ್ತಿಗೆ ಪೂರಕವಾದ್ದರಿಂದ ನಾನದನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಹೀಗೆ ಪ್ರಧಾನಿ ನರೇಂದ್ರ ಮೋದಿ ಸರಕಾರದ ನಡೆ ಪರವಾಗಿ ಮಾತನಾಡಿರುವುದು ಇವರೇ ಮೊದಲೇನಲ್ಲ. ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ದ್ವಿವೇದಿ ಅವರು ಸರಕಾರ ಐತಿಹಾಸಿಕ ತಪ್ಪನ್ನು ಸರಿಪಡಿಸಿದೆ ಎಂದು ಹೇಳಿದ್ದರು. ಜತೆಗೆ ಸಂಸದ ದೀಪೀಂದರ್ ಹೂಡಾ ಅವರೂ ನಾವು 21ನೇ ಶತಮಾನದಲ್ಲಿದ್ದೇವೆ. ಆದ್ದರಿಂದ ಇಂತಹ ವಿಧಿಯ ಅವಶ್ಯಕತೆಯೇ ಇಲ್ಲ ಎಂದು ಹೇಳಿದ್ದರು.
I support the move on #JammuAndKashmir & #Ladakh and its full integration into union of India.
Would have been better if constitutional process had been followed. No questions could have been raised then. Nevertheless, this is in our country’s interest and I support this.
— Jyotiraditya M. Scindia (@JM_Scindia) August 6, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.