ಇಸ್ರೋಗೆ ಶಿವನ್ ನೂತನ ಅಧ್ಯಕ್ಷ
Team Udayavani, Jan 11, 2018, 9:20 AM IST
ಹೊಸದಿಲ್ಲಿ: ಕಳೆದ ಫೆಬ್ರವರಿಯಲ್ಲಿ ಒಂದೇ ಹಂತದಲ್ಲಿ ನಭಕ್ಕೆ 104 ಉಪಗ್ರಹಗಳನ್ನು ಉಡಾಯಿಸಿದ ಯೋಜನೆಯ ನೇತೃತ್ವ ವಹಿಸಿದ ವಿಜ್ಞಾನಿ ಡಾ| ಶಿವನ್ ಕೆ. ಈಗ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಹೊಸ ಅಧ್ಯಕ್ಷರಾಗಿದ್ದಾರೆ. ಅವರು ಬಾಹ್ಯಾಕಾಶ ಇಲಾ ಖೆಯ ಕಾರ್ಯದರ್ಶಿ ಯಾಗಿಯೂ ನೇಮಕವಾಗಿದ್ದಾರೆ. ಕೇಂದ್ರ ಸಂಪುಟಕ್ಕೆ ಸಂಬಂಧಿಸಿದ ನೇಮಕ ಸಮಿತಿ ಈ ಬಗ್ಗೆ ಒಪ್ಪಿಗೆ ನೀಡಿದೆ. ಜ.12ರಂದು ಇಸ್ರೋ 100ನೇ ಉಪಗ್ರಹ ಉಡಾವಣೆ ಮಾಡುವ ಸಂದರ್ಭದಲ್ಲಿಯೇ ಈ ಘೋಷಣೆ ಮಾಡಲಾಗಿದೆ. ಹಾಲಿ ಅಧ್ಯಕ್ಷ ಎ.ಎಸ್.ಕಿರಣ್‌ಕುಮಾರ್‌ರ ಅವಧಿ ಜ.14ರಂದು ಮುಕ್ತಾಯವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವನ್ ಕೆ., “ಸರಕಾರದ ನಿರ್ಧಾರವನ್ನು ವಿನೀತ ಭಾವದಿಂದ ಸ್ವೀಕರಿಸುತ್ತೇನೆ. ಇಸ್ರೋದಲ್ಲಿ ಹಲವು ಗಣ್ಯರು ಈ ಸ್ಥಾನ ಅಲಂಕರಿಸಿದ್ದಾರೆ. ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದು ಆದ್ಯತೆ’ ಎಂದು ಹೇಳಿದ್ದಾರೆ. ಏರೋನಾಟಿಕಲ್ ಎಂಜಿನಿಯರಿಂಗ್‌ನಲ್ಲಿ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ 1980ರಲ್ಲಿ ಪದವಿ ಪಡೆದ ಅವರು, ಬೆಂಗಳೂರಿನ ಐಐಎಸ್‌ಸಿಯಿಂದ 1982ರಲ್ಲಿ ಅದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2006ರಲ್ಲಿ ಐಐಟಿ ಬಾಂಬೆಯಿಂದ ಪಿಎಚ್.ಡಿ ಪಡೆದಿದ್ದಾರೆ. 1982ರಿಂದ ಅವರು ಇಸ್ರೋದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.