ಕಾಲಿಖೋ ಪುಲ್ ಸಾವಿನ ಸಿಬಿಐ ತನಿಖೆ ಆಗ್ರಹಿಸಿ ಸಿಜೆಐಗೆ ಪತ್ನಿಯ ಪತ್ರ
Team Udayavani, Feb 17, 2017, 4:58 PM IST
ಹೊಸದಿಲ್ಲಿ : ಕಳೆದ ವರ್ಷ ಆಗಸ್ಟ್ 9ರಂದು, ತಾನಿನ್ನೂ ತೆರವು ಮಾಡಿರದ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ, ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಅರುಣಾಚಲ ಪ್ರದೇಶದ ಅಂದಿನ ಪದಚ್ಯುತ ಮುಖ್ಯಮಂತ್ರಿ ಕಾಲಿಖೋ ಪುಲ್ ಅವರ ಶಂಕಾಸ್ಪದ ಸಾವಿನ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಪುಲ್ ಅವರ ಪತ್ನಿ ದಾಂಗ್‌ವಿಮ್‌ಸಾಯಿ ಪುಲ್ ಅವರು ದೇಶದ ಸುಪ್ರೀಂ ಕೋರ್ಟಿನ ವರಿಷ್ಠ ನ್ಯಾಯಮೂರ್ತಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕಾಲಿಖೋ ಪುಲ್ ಅವರ ಡೆತ್ ನೋಟ್ ಆಧರಿಸಿ, ಉನ್ನತ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾಡಲಾಗಿದ್ದ ಅದರೊಳಗಿನ ಆರೋಪಗಳ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡು ಸಿಬಿಐ ತನಿಖೆ ನಡೆಯಬೇಕು ಎಂದು ಪುಲ್ ಅವರ ಪತ್ನಿ ದಾಂಗ್‌ವಿಮ್‌ಸಾಯಿ ಪುಲ್ ಅವರು ಒತ್ತಾಯಿಸಿದ್ದಾರೆ.
ತನ್ನ ಪತಿ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪತ್ರಿಕಾಗೋಷ್ಠಿ ನಡೆಸಿ ತಾನು ಬಹಿರಂಗಗೊಳಿಸಿದ ಬಳಿಕ ತನಗೆ, ತನ್ನ ಮಕ್ಕಳಿಗೆ ಹಾಗೂ ಕುಟುಂಬ ಸದಸ್ಯರಿಗೆ ಅರುಣಾಚಲ ಸರಕಾರದಿಂದ ಹಾಗೂ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆಗಳು ಬರುತ್ತಿವೆ ಎಂದಾಕೆ ಹೇಳಿದ್ದಾರೆ.
ಕಾಲಿಖೋ ಪುಲ್ ಅವರು ಅರುಣಾಚಲದಲ್ಲಿನ ಬಿರುಸಿನ ರಾಜಕೀಯ ಬೆಳವಣಿಗೆಗಳ ಪರಿಣಾಮವಾಗಿ ಕಳೆದ ವರ್ಷ ಫೆ.19ರಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಆದರೆ ಜುಲೈ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಅನುಸರಿಸಿ ಪುಲ್ ತಮ್ಮ ಮುಖ್ಯಮಂತ್ರಿ ಪದವನ್ನು ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.