ಮಾಸಾಂತ್ಯಕ್ಕೆ ಕಮಲ್ ಹೊಸ ಪಕ್ಷ ಶುರು?
Team Udayavani, Sep 14, 2017, 8:40 AM IST
ಚೆನ್ನೈ: ತಮಿಳುನಾಡಿನಲ್ಲಿ ಹಾಲಿ ಉಂಟಾಗಿರುವ ರಾಜಕೀಯ ಅಸ್ಥಿರತೆ ಮತ್ತು ತಮಿಳುಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ವದಂತಿ ಇರುವಾಗಲೇ ಮತ್ತೂಬ್ಬ ಪ್ರಭಾವಿ ನಟ ಕಮಲ್ಹಾಸನ್ ಹೊಸ ಪಕ್ಷ ಶುರು ಮಾಡುವ ಸುಳಿವು ನೀಡಿದ್ದಾರೆ. ಮಾಸಾಂತ್ಯಕ್ಕೆ ಅದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಆಪ್ತರು ಹೇಳಿದ್ದಾರೆ. ನವೆಂಬರ್ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ಹೊಸ ಪಕ್ಷದ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ ಕಮಲ್.
ಜತೆಗೆ ಅಲ್ಲಿನ ಪಕ್ಷಗಳು ನವೆಂಬರ್ ಚುನಾವಣೆಗಾಗಿ ಮೈತ್ರಿ ಕೂಟ ರಚನೆಯ ಘೋಷಣೆ ಮಾಡುವ ಮುನ್ನವೇ ಹೊಸ ಪಕ್ಷ ಉದಯವಾಗಬೇಕೆನ್ನುವುದು ಅವರ ಮಹತ್ವಾಕಾಂಕ್ಷೆ ಎನ್ನಲಾಗಿದೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ನಡೆದಿವೆ. ಹಾಲಿ ದಸರೆ ಅಥವಾ ಗಾಂಧಿ ಜಯಂತಿಯಂದು ಹೊಸ ಪಕ್ಷ ಘೋಷಣೆ ಸಾಧ್ಯತೆ ಇದೆ. ಸೆ.15ರಂದು ಚೆನ್ನೈನಲ್ಲಿ ಮತ್ತು ಸೆ.16ರಂದು ಕಲ್ಲಿಕೋಟೆಯಲ್ಲಿ ದೊಡ್ಡ ಕಾರ್ಯಕ್ರಮಗಳನ್ನೂ ಆಯೋಜಿಸಿದ್ದಾರೆ ಕಮಲ್ ಹಾಸನ್. ಕೆಲ ದಿನಗಳ ಹಿಂದಷ್ಟೇ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರನ್ನು ತಿರುವನಂತಪುರದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಎಡಪಕ್ಷಗಳ ನಿಲುವು ತಮಗೆ ಒಪ್ಪಿಗೆ ಎಂದು ಹೇಳಿದ್ದರು. ಹೀಗಾಗಿ ಅವರು ಸಿಪಿಎಂ ಸೇರಲಿದ್ದಾರೆ ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.