ಪಟ್ಟಕ್ಕೆ ಪೈಪೋಟಿ : ಮಧ್ಯಪ್ರದೇಶ ಸಿಎಂ ಆಗಿ ಕಮಲನಾಥ್ ಆಯ್ಕೆ
Team Udayavani, Dec 14, 2018, 5:30 AM IST
ಹೊಸದಿಲ್ಲಿ/ಹೈದರಾಬಾದ್: ಅಂತೂ ಇಂತೂ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪಕ್ಷದ ಹಿರಿಯ ನಾಯಕ ಕಮಲ್‌ನಾಥ್ ಅವರನ್ನು ಅಂತಿಮಗೊಳಿಸಿದೆ. ಗುರುವಾರ ತಡರಾತ್ರಿ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಕಮಲ್‌ನಾಥ್ ಆಯ್ಕೆಯನ್ನು ಘೋಷಣೆ ಮಾಡಿದೆ. ಮುಖ್ಯಮಂತ್ರಿ ಗಾದಿ ಪೈಪೋಟಿಯಲ್ಲಿ ರಾಜಮನೆತನದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶರಣಾಗಿದ್ದಾರೆ. 2019ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯರಿಗೇ ಮಣೆ ಹಾಕಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊಮ್ಮಿದ್ದರೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್‌ನಾಥ್ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಜ್ಯೋತಿರಾದಿತ್ಯ ಸಿಂಧಿಯಾ ನಡುವಿನ ಪೈಪೋಟಿಯಿಂದಾಗಿ ಬುಧವಾರವಿಡೀ ಮುಖ್ಯಮಂತ್ರಿ ಹುದ್ದೆ ಯಾರಿಗೆಂದು ಅಂತಿಮವಾಗಿರಲಿಲ್ಲ. ಗುರುವಾರವೂ ಈ ಸಂಬಂಧ ದಿನವಿಡೀ ಚರ್ಚೆ, ಸಮಾಲೋಚನೆ ನಡೆದವು. ಇಬ್ಬರೂ ನಾಯಕರು ದಿಲ್ಲಿಗೆ ಆಗಮಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದರು. ಅಂತಿಮವಾಗಿ ಕಮಲ್‌ನಾಥ್ ಹೆಸರು ಘೋಷಣೆಯಾಯಿತು.
ರಾಜಸ್ಥಾನದಲ್ಲಿ ಕಗ್ಗಂಟು
ಅತ್ತ ರಾಜಸ್ಥಾನದಲ್ಲಿ ಸಿಎಂ ಗಾದಿ ಕಗ್ಗಂಟು ಮುಂದುವರಿದಿದೆ. ಸಚಿನ್ ಪೈಲಟ್, ಅಶೋಕ್ ಗೆಹ್ಲೊಟ್ ಜತೆಗೆ ರಾಹುಲ್ ಗಾಂಧಿ ಸತತ ಮಾತುಕತೆ ನಡೆಸಿದ್ದಾರೆ. ಇಲ್ಲಿ ಹಿರಿಯರಾದ ಅಶೋಕ್ ಗೆಹ್ಲೊಟ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಸಚಿನ್ ಪೈಲಟ್, ತಾನು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಸಿಎಂ ಗಾದಿ ನನ್ನ ಹಕ್ಕಾಗಿದ್ದು, ನನಗೇ ಅವಕಾಶ ಕೊಡಬೇಕು ಎಂದು ರಾಹುಲ್ ಮುಂದೆ ಪ್ರತಿಪಾದಿಸಿದ್ದಾರೆ ಎಂದು ಆಂಗ್ಲ ಸುದ್ದಿವಾಹಿನಿಗಳು ವರದಿ ಮಾಡಿವೆ.
ಹಿಂಸಾಚಾರ
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಸಚಿನ್ ಪೈಲಟ್‌ಗೆ ಕೊಡಬೇಕು ಎಂದು ಗುಜ್ಜರ್ ಸಮುದಾಯ ಒತ್ತಾಯಿಸಿದೆ. ಜತೆಗೆ ಆಗ್ರಾ- ಜೈಪುರ ಹೆದ್ದಾರಿಯ ಅಲ್ಲಲ್ಲಿ ಪ್ರತಿಭಟನೆಗಳನ್ನೂ ನಡೆಸಲಾಗಿದೆ. ಕೆಲವೆಡೆ ಬಸ್ ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಆ್ಯಪ್ ಮೂಲಕ ಸಿಎಂ ಆಯ್ಕೆ
ಕಾರ್ಯಕರ್ತರೊಂದಿಗೆ ನೇರವಾಗಿ ವ್ಯವಹರಿಸಲು ರಾಹುಲ್ ಗಾಂಧಿ ಬಳಸಿದ ‘ಶಕ್ತಿ’ ಆ್ಯಪ್ ಅನ್ನು ಈಗ ಸಿಎಂ ಆಯ್ಕೆಗೂ ಬಳಸಿಕೊಳ್ಳಲಾಗಿದೆ. ಆದರೆ ಅದರ ವಿವರ ಬಹಿರಂಗಗೊಳಿಸಿಲ್ಲ.
ಇಂದು ತೀರ್ಮಾನ?
ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ನೇಮಿಸಬೇಕು ಎಂಬ ಬಗ್ಗೆ ಶುಕ್ರವಾರ ಪ್ರಕಟಿಸಲಾಗುತ್ತದೆ ಎಂದು ಪಕ್ಷದ ವೀಕ್ಷಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ದಿಲ್ಲಿಯಲ್ಲಿ ಸಮಾಲೋಚನೆಯೂ ನಡೆದಿದೆ. ಇದೇ ವೇಳೆ ರಾಯ್‌ಪುರದಲ್ಲಿ ಪಕ್ಷದ ನಾಯಕ ಭೂಪೇಶ್ ಬಘೇಲ್ ನಿವಾಸದ ಮುಂದೆ ಘರ್ಷಣೆ ನಡೆದಿದೆ. ಟಿ.ಎಸ್.ಸಿಂಗ್ ದೇವ್, ತಾಮ್ರಧ್ವಜ ಸಾಹೂ, ಚರಣ್ ದಾಸ್ ಮಹಾಂತ್ ಸಿಎಂ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.