![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 31, 2017, 9:26 AM IST
ಕನೌಜ್: ಉತ್ತರಪ್ರದೇಶದಲ್ಲಿ ನಡೆದ ಅತ್ಯಂತ ಕ್ರೂರ ಮಹಿಳಾ ದೌರ್ಜನ್ಯದ ಪ್ರಕರಣವೊಂದರಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಕಾರಣಕ್ಕಾಗಿ ಪತ್ನಿಯ ಜನನಾಂಗಕ್ಕೆ ಪತಿ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ.
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯನ್ನು ಥಳಿಸಿ ಆ್ಯಸಿಡ್ ಸುರಿದಿದ್ದಾನೆ ಎಂದು ಎಎನ್‌ಐ ವರದಿಯಲ್ಲಿ ತಿಳಿದು ಬಂದಿದೆ.
ದಾಳಿಯ ಬಳಿಕ ತೀವ್ರ ನೋವಿನಿಂದ ಮಹಿಳೆ ಕಿರುಚಿಕೊಂಡಿದ್ದು ಆಕೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೋತ್ವಾಲಿ ಜಿಲ್ಲೆಯ ಬೆಹರಿನ್ ಗ್ರಾಮದ ಮಹಿಳೆ ಆರು ವರ್ಷದ ಹಿಂದೆ ವಿವಾಹವಾಗಿದ್ದಳು. ಎರಡು ಮಕ್ಕಳನ್ನು ಹೊಂದಿರುವ ದಂಪತಿಗೆ ನಿರಂತರ ಜಗಳವಾಗುತ್ತಿತ್ತು ಎಂದು ವರದಿಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಪತಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ನಡೆದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.