![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 7, 2024, 8:29 PM IST
ಕಾನ್ಪುರ: ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿ ಅವರಿಗೆ ಕಾನ್ಪುರದ ಎಂಪಿ-ಎಂಎಲ್‌ಎ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ 20 ಸಾವಿರ ರೂ. ದಂಡ ವಿಧಿಸಲಾಗಿದೆ. ಮಹಾರಾಜಗಂಜ್ ಜೈಲಿನಲ್ಲಿರುವ ಇರ್ಫಾನ್ ಸೋಲಂಕಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದ್ದು, ಇರ್ಫಾನ್ ಸಹೋದರ ರಿಜ್ವಾನ್‌ಗೂ 7 ವರ್ಷ ಶಿಕ್ಷೆ ವಿಧಿಸಲಾಗಿದೆ.
ಜೂನ್ 3 ರಂದು, ಜಾಜ್ಮೌ ಬೆಂಕಿ ಹಚ್ಚಿ ಮನೆ ಸುಟ್ಟ ಪ್ರಕರಣದಲ್ಲಿ ಎಸ್ಪಿ ಶಾಸಕ ಇರ್ಫಾನ್ ಸೋಲಂಕಿ ಸೇರಿದಂತೆ 5 ಆರೋಪಿಗಳನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಶಾಸಕ ಇರ್ಫಾನ್, ಅವರ ಸಹೋದರ ರಿಜ್ವಾನ್ ಸೋಲಂಕಿ, ಶೌಕತ್ ಪೆಹಲ್ವಾನ್, ಇಸ್ರೇಲ್ ಆತೆ ವಾಲಾ ಮತ್ತು ಮೊಹಮ್ಮದ್ ಷರೀಫ್ ಅವರನ್ನು ಎಂಪಿಎಂಎಲ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ.
‘ಎಲ್ಲ ಅಪರಾಧಿಗಳಿಗೂ ಗರಿಷ್ಠ 7 ವರ್ಷಗಳು ಶಿಕ್ಷೆ ಏಕಕಾಲದಲ್ಲಿ ನಡೆಯುತ್ತವೆ. ಪ್ರತಿ ಅಪರಾಧಿಗೆ ಒಟ್ಟು 30,500 ರೂ. ದಂಡವನ್ನು ವಿಧಿಸಲಾಗಿದೆ. ನ್ಯಾಯಾಲಯದ ಆದೇಶವು ಸಮರ್ಥನೀಯವಾಗಿದೆ ಎಂದು ನಾನು ಭಾವಿಸುತ್ತೇನೆ’ ಎಂದು ಪ್ರಾಸಿಕ್ಯೂಷನ್ ವಕೀಲ ಪ್ರಾಚಿ ಶ್ರೀವಾಸ್ತವ್ ಹೇಳಿದ್ದಾರೆ.
ನಜೀರ್ ಫಾತಿಮಾ ಪರವಾಗಿ ಜಜ್ಮೌ ಪೊಲೀಸ್ ಠಾಣೆಯಲ್ಲಿ 8 ನವೆಂಬರ್ 2022 ರಂದು ಪ್ರಕರಣ ದಾಖಲಿಸಲಾಗಿತ್ತು. ಶಾಸಕ ಸೇರಿ ಒಟ್ಟು 12 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ತನ್ನ ಮನೆಯನ್ನು ಎಲ್ಲರೂ ಸುಟ್ಟು ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿರುವುದರಿಂದ ಇರ್ಫಾನ್ ಶಾಸಕ ಸ್ಥಾನದಿಂದ ಅನರ್ಹವಾಗುವುದು ಖಚಿತವಾಗಿದೆ, ಔಪಚಾರಿಕ ಘೋಷಣೆ ಮಾತ್ರ ಮಾಡಬೇಕಾಗಿದೆ. 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಸಿಸಮಾವು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಅಜಂ ಖಾನ್ ಹಾಗೂ ಅವರ ಪುತ್ರನ ವಿಧಾನಸಭಾ ಸದಸ್ಯತ್ವವೂ ರದ್ದಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.