ಕೇಜ್ರಿಗೆ ಜೈನ್ 2 ಕೋಟಿ ಲಂಚ: ಆಪ್ನ ಮಾಜಿ ಸಚಿವ ಮಿಶ್ರಾ ಬಾಂಬ್!
Team Udayavani, May 7, 2017, 12:43 PM IST
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಕಲಹ ತಾರಕಕ್ಕೇರಿದ್ದು ಇದಕ್ಕೆ ಸಾಕ್ಷಿಯಾಗಿ ಸಂಪುಟದಿಂದ ಕೈಬಿಟ್ಟ ಸಚಿವ ಕಪಿಲ್ ಮಿಶ್ರಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ 2 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಮಾಡಿದ್ದಾರೆ.
ಭಾನುವಾರ ರಾಜ್ ಘಾಟ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಪಿಲ್ ಮಿಶ್ರಾ ಜಲ ಹಗರಣದ ಕುರಿತು ಮಾತನಾಡಿದರು. ಸಚಿವ ಸಂತ್ಯೇಂದ್ರ ಜೈನ್ ಅವರು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ 2 ಕೋಟಿ ರೂಪಾಯಿ ನೀಡಿದ್ದಾರೆ. ಇದನ್ನು ನಾನು ಕಣ್ಣಾರೇ ನೋಡಿದ್ದೇನೆ. 50 ಕೋಟಿ ರೂಪಾಯಿಗೆ ಭೂ ಹಗರಣದ ಡೀಲ್ ನಡೆದಿತ್ತು ಎಂದಿದ್ದಾರೆ.
400 ಕೋಟಿ ರೂಪಾಯಿಯ ವಾಟರ್ ಟ್ಯಾಂಕರ್ ಹಗರಣದಲ್ಲಿ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಜಲ ಸಂಪನ್ಮೂಲ ಖಾತೆಯ ಸಚಿವ ಕಪಿಲ್ ಮಿಶ್ರಾರನ್ನು ಸಂಪುಟದಿಂದ ಕೈ ಬಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.