ಅತಂತ್ರ ಸರಕಾರ : ಯಾರಿಗೂ ಬಹುಮತವಿಲ್ಲವೆಂದ ಎರಡು ಸಮೀಕ್ಷೆಗಳು
Team Udayavani, Apr 24, 2018, 9:08 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು 2 ಸಮೀಕ್ಷೆಗಳು ಭವಿಷ್ಯ ನುಡಿದಿವೆ. ವಿಶೇಷವೆಂದರೆ ಟೈಮ್ಸ್‌ನೌ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದರೆ, ಎಬಿಪಿ ನ್ಯೂಸ್ ನ ಸಮೀಕ್ಷೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಆದರೂ ಯಾವುದೇ ಪಕ್ಷಗಳು ಬಹುಮತಕ್ಕೆ ಬೇಕಾದ 113ರ ಅಂಕೆಯನ್ನು ಮುಟ್ಟಲು ಸಾಧ್ಯವಾಗಿಲ್ಲ. 2019ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಕರ್ನಾಟಕದ ಫಲಿತಾಂಶ ಭಾರೀ ಮಹತ್ವ ಪಡೆದಿದೆ.
ಟೈಮ್ಸ್ ನೌ- ವಿಎಂಆರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 91 ಸ್ಥಾನ ಪಡೆದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ 89 ಸ್ಥಾನಗಳನ್ನು ಪಡೆಯುವ ಮೂಲಕ 2ನೇ ಸ್ಥಾನ ಪಡೆಯಲಿದೆ. ಜೆಡಿಎಸ್ 40 ಸ್ಥಾನ ಗಳಿಸಲಿದೆ. ಎಬಿಪಿ ಸುದ್ದಿ ವಾಹಿನಿ ಜೈನ್-ಲೋಕನೀತಿ-ಸಿ.ಎಸ್.ಡಿ.ಎಸ್. ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿ 89-95 ಸ್ಥಾನ ಗಳಿಸಿ ಮೊದಲ ಸ್ಥಾನದಲ್ಲಿರಲಿದೆ. ಹಾಲಿ ಆಡಳಿತಾರೂಢ ಕಾಂಗ್ರೆಸ್ 85-91 ಸ್ಥಾನ ಪಡೆಯಲಿದೆ. ಜೆಡಿಎಸ್ 32-38 ಸ್ಥಾನ ಗಳಿಸಲಿದೆ.
ಜೆ.ಡಿ.ಎಸ್. ಕಿಂಗ್‌ಮೇಕರ್
ಎಬಿಪಿ ಚಾನೆಲ್ ಸಂಭಾವ್ಯ ಮೈತ್ರಿಕೂಟದ ಬಗ್ಗೆಯೂ ಬೆಳಕು ಚೆಲ್ಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಅಥವಾ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಸರಕಾರ ರಚನೆಯಾಗಲಿದೆ ಎಂದು ಹೇಳಿಕೊಂಡಿದೆ. ಅಂದರೆ ಕಾಂಗ್ರೆಸ್ 88 ಮತ್ತು ಜೆಡಿಎಸ್‌ನ 35 ಸಹಿತ ಒಟ್ಟು 123 ಸ್ಥಾನ ಅಥವಾ ಬಿಜೆಪಿ 92 ಮತ್ತು ಜೆಡಿಎಸ್‌ನ 35 ಸೇರಿ ಸಂಖ್ಯಾಬಲ 127 ಆಗುತ್ತದೆ. ಹೀಗಾಗಿ ಜೆಡಿಎಸ್ ಪಾತ್ರ ನಿರ್ಣಾಯಕ ಎಂದಿದೆ.
ಇನ್ನು ಸಿಎಂ ಸಿದ್ದರಾಮಯ್ಯಗೆ ಶೇ.30ರಷ್ಟು ಮತಗಳು ಬಂದಿದ್ದು ಉತ್ತಮ ಸಿಎಂ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಜೆಪಿಯ ಯಡಿಯೂರಪ್ಪಗೆ ಶೇ.25 ಮತ್ತು ಜೆಡಿಎಸ್ ಹುರಿಯಾಳು ಎಚ್.ಡಿ.ಕುಮಾರಸ್ವಾಮಿಗೆ ಶೇ.20ರಷ್ಟು ಮತಗಳು ಸಿಕ್ಕಿವೆ. ನರೇಂದ್ರ ಮೋದಿಯವರಿಗೆ ಶೇ.43ರಷ್ಟು ಬೆಂಬಲ ವ್ಯಕ್ತವಾದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಶೇ.28ರಷ್ಟು ಮತಗಳು ಸಿಕ್ಕಿವೆ. ಟೈಮ್ಸ್ ನೌ ನಡೆಸಿದ ಸಮೀಕ್ಷೆಯಲ್ಲಿ ಮುಂಬಯಿ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ 23, ಕಾಂಗ್ರೆಸ್‌ಗೆ 21, ಜೆಡಿಎಸ್‌ಗೆ 21 ಸ್ಥಾನ ಸಿಕ್ಕಿದೆ. ಹಿಂದಿನ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಗೆ 10 ಸ್ಥಾನಗಳು ಹೆಚ್ಚಾಗಿವೆ.
ಕರಾವಳಿಯಲ್ಲಿ 3 ಸ್ಥಾನ ಹೆಚ್ಚಳ
ಕರಾವಳಿ ಕರ್ನಾಟಕದಲ್ಲಿ ಬಿಜೆಪಿಗೆ ಹಿಂದಿನ ಸಾಲಿಗಿಂತ ಮೂರು ಸ್ಥಾನ ಹೆಚ್ಚು ಸಿಗಲಿದ್ದರೆ, ಕಾಂಗ್ರೆಸ್‌ಗೆ 2 ಸ್ಥಾನ ಕಡಿಮೆಯಾಗಲಿದೆ. ಮಹತ್ವದ ಅಂಶವೆಂದರೆ ಬಿಎಸ್‌ಪಿ-ಜೆಡಿಎಸ್ ಮೈತ್ರಿಕೂಟಕ್ಕೆ 2 ಸ್ಥಾನ ಲಭಿಸಲಿದೆ. ಕರ್ನಾಟಕದಲ್ಲಿ ಈಗಲೇ ಲೋಕಸಭೆಗೂ ಚುನಾವಣೆ ನಡೆದರೆ ಬಿಜೆಪಿ 17, ಕಾಂಗ್ರೆಸ್ 9, ಜೆಡಿಎಸ್ 3 ಮತ್ತು ಇತರರು 2 ಸ್ಥಾನ ಜಯಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.