ಬಿಎಸ್‌ವೈಗೆ ಚಪ್ಪಾಳೆ ಗೌರವ; ಎದ್ದು ನಿಂತು ಗೌರವಿಸುವಂತೆ ಪ್ರಧಾನಿ ಮೋದಿಯಿಂದಲೇ ಸೂಚನೆ
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ಬೆಳವಣಿಗೆ
Team Udayavani, Dec 11, 2019, 10:08 PM IST
ನವದೆಹಲಿ: ಕರ್ನಾಟಕದ 15 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬುಧವಾರ ನವದೆಹಲಿಯಲ್ಲಿ ನಡೆದ ಪಕ್ಷದ ಸಂಸದೀಯ ಸಭೆಯಲ್ಲಿ ತುಂಬು ಹೃದಯದ ಅಭಿನಂದನೆ ಸಲ್ಲಿಸಲಾಗಿದೆ.
ಕರ್ನಾಟಕದ ಲೋಕಸಭಾ ಸದಸ್ಯರು ಸೇರಿದಂತೆ ಎಲ್ಲರೂ ಕೂಡ ಯಡಿಯೂರಪ್ಪ ಅವರ ಸಾಧನೆಗೆ ಎದ್ದು ನಿಂತು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರೇ ಖುದ್ದಾಗಿ, ಎಲ್ಲರೂ ಎದ್ದು ನಿಂತು ಬಿಎಸ್‌ವೈಗೆ ಗೌರವ ಸಲ್ಲಿಸುವಂತೆ ಸೂಚಿಸಿದ್ದು ವಿಶೇಷ.
ಸಭೆಯಲ್ಲಿನ ಅಂಶಗಳ ಬಗ್ಗೆ ವಿವರಣೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ವಿಚಾರ ತಿಳಿಸಿದ್ದಾರೆ. ಬಿಜೆಪಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಉಪಚುನಾವಣೆಯಲ್ಲಿನ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಮತದಾರರಿಗೂ ಕೃತಜ್ಞತೆ ಸಲ್ಲಿಸಿದರು ಎಂದರು.
ಎಲ್ಲದಕ್ಕಿಂತ ಮೊದಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಎರಡನೇ ಅವಧಿಯಲ್ಲಿನ ಆರು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.