New Delhi: ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಕರ್ನಾಟಕ ಸಿಎಂ: ಪರಿಹಾರ ಬಿಡುಗಡೆಗೆ ಆಗ್ರಹ
Team Udayavani, Dec 20, 2023, 12:40 PM IST
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು. ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು.
ಇದನ್ನೂ ಓದಿ: Ghaziabad: ಚಹಾ ಮಾಡುವ ವಿಚಾರಕ್ಕೆ ಜಗಳ; ಪತ್ನಿಯನ್ನು ಇರಿದು ಹತ್ಯೆಗೈದ ಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.