ಪೋಟೋ ಬಳಕೆ: ಕಾಂಗ್ರೆಸ್ ವಿರುದ್ಧ ಬಹುಭಾಷಾ ನಟ ಅಖೀಲ್ ಅಯ್ಯರ್ ಗರಂ
Team Udayavani, Sep 23, 2022, 10:45 PM IST
ನವದೆಹಲಿ: ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಕೈಗೊಂಡಿರುವ ಶೇ.40 ಸರ್ಕಾರ ಎಂಬ ಅಭಿಯಾನದಲ್ಲಿ ಅನುಮತಿ ಇಲ್ಲದೆ ಫೋಟೋ ಬಳಕೆ ಮಾಡಿದ್ದಕ್ಕೆ ಬಹುಭಾಷಾ ನಟ, ಕರ್ನಾಟಕ ಮೂಲದ ಅಖೀಲ್ ಅಯ್ಯರ್ ಕ್ರುದ್ಧಗೊಂಡಿದ್ದಾರೆ. ಜತೆಗೆ ಅದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
“ನನ್ನ ಅನುಮತಿ ಇಲ್ಲದೇ ಕಾನೂನಬಾಹಿರವಾಗಿ ಕಾಂಗ್ರೆಸ್ ನನ್ನ ಪೋಟೋ ಬಳಸಿದೆ. ಇದರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಲು ಚಿಂತನೆ ನಡೆಸಿದ್ದೇನೆ’ ಎಂದು ನಟ ಅಖೀಲ್ ಅಯ್ಯರ್ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಅದರಲ್ಲಿ ನಟ ಅಖೀಲ್ ಅಯ್ಯರ್ ಚಿತ್ರ ಬಳಸಲಾಗಿದೆ.
I am appalled to see that my face is being used illegally and without my consent for “40% Sarkara” – an @INCIndia campaign that i have nothing to do with.
I will be taking legal action against this.@RahulGandhi @siddaramaiah @INCKarnataka request you to please look into this pic.twitter.com/y7LZ9wRXW9
— Akhil Iyer (@akhiliy) September 23, 2022
ಅದರಲ್ಲಿ “40 ಪರ್ಸೆಂಟ್ ಸರ್ಕಾರದ ಹೊಟ್ಟೆಬಾಕತನವು 54,000 ಯುವಕರ ವೃತ್ತಿ ಜೀವನವನ್ನು ಕಸಿದುಕೊಂಡಿದೆ. 40 ಪರ್ಸೆಂಟ್ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈಜೋಡಿಸಿ. ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ.
ವೆಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ದೂರನ್ನು ದಾಖಲಿಸಿ. 2023ರಲ್ಲಿ ಕಾಂಗ್ರೆಸ್ ಸರ್ಕಾರ ಈ ದೂರಿನ ಕುರಿತು ಕ್ರಮ ಕೈಗೊಳ್ಳಲಿದೆ’ ಎಂದು ಮುದ್ರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.