ಜಸ್ಟೀಸ್ ನಾಗರತ್ನ ಬಿ.ವಿ.ಸೇರಿ 9 ಮಂದಿ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾಗಿ ಪ್ರಮಾಣ
Team Udayavani, Aug 31, 2021, 12:55 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಯಾಗಿ ಇತ್ತೀಚೆಗಷ್ಟೇ ನೇಮಕವಾಗಿದ್ದ ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ. ಅವರನ್ನು ಒಳಗೊಂಡು ಮೂವರು ಮಹಿಳಾ ನ್ಯಾಯಮೂರ್ತಿಗಳೂ ಸೇರಿ ಒಂಬತ್ತು ಮಂದಿ ನ್ಯಾಯಮೂರ್ತಿಗಳು ಇಂದು (ಮಂಗಳವಾರ, ಆಗಸ್ಟ್ 31) ಪ್ರಮಾಣವಚನ ಸ್ವೀಕರಿಸಿದ್ದಾರೆ.
ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ, ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : ಗೃಹ ಸಚಿವರು ಭಾಷಣದ ವೇಳೆ ಕುಸಿದು ಬಿದ್ದ ಪೊಲೀಸ್ ಸಿಬ್ಬಂದಿ: ಮಾನವೀಯತೆ ಮೆರೆದ ಎಸ್ ಪಿ
ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೊಸದಾಗಿ ಸುಪ್ರೀಂ ಕೋರ್ಟ್ ಗೆ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದ್ದಾರೆ.
ಇನ್ನು, ಜಸ್ಟೀಸ್ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಪರಮೋಚ್ಛ ನ್ಯಾಯಾಲಯದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಠಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ.
ಸದ್ಯ, ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಚಂದ್ರಚೂಡ್, ಸಂಜೀವ್ ಖನ್ನಾ, ಸೂರ್ಯಕಾಂತ್ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ. ಈ ಪೈಕಿ ಕಡೆಯವರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅವಧಿ ಆದ ನಂತರ 2027 ರಲ್ಲಿ ಹಿರಿತನದ ಆಧಾರದಲ್ಲಿ ಕರ್ನಾಟಕ ಮೂಲದ ನ್ಯಾಯಮೂರ್ತಿ ನಾಗರತ್ನ ಬಿ.ವಿ. ಅವರಿಗೆ ಮುಖ್ಯ ನ್ಯಾಯಮೂರ್ತಿ ಆಗುವ ಯೋಗ ಕೂಡಿಬರಲಿದೆ. ಹಾಗಾದರೆ ಅವರು ಸುಪ್ರೀಂ ಕೋರ್ಟಿನ ಮೊದಲ ಮಹಿಳಾ ಮುಖ್ಯ ನ್ಯಾಯಾಮೂರ್ತಿಯಾದ ಿತಿಹಾಸ ನಿರಮಿಸಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಡೆಲ್ಟಾ ರೂಪಾತರಿಗಿಂತ ಅಪಾಯಕಾರಿ ಕೋವಿಡ್ ಹೊಸ ರೂಪಾಂತರಿ ಸಿ.1.2
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.