ರಾಜ್ಯದಲ್ಲಿ ಮೋದಿ ಮ್ಯಾಜಿಕ್: ಮತ್ತೆ ಇಪ್ಪತ್ತು ರ‍್ಯಾಲಿ
ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಗೆ ಲಗ್ಗೆ
Team Udayavani, Apr 3, 2023, 7:20 AM IST
ನವದೆಹಲಿ/ಬೆಂಗಳೂರು: ರಾಜ್ಯ ವಿಧಾನಸಭೆ ವೇಳಾಪಟ್ಟಿ ಬಿಡುಗಡೆಗೆ ಮುನ್ನವೇ ಏಳು ಬಾರಿ ಕರ್ನಾಟಕದಲ್ಲಿ ಧೂಳೆಬ್ಬಿಸಿದ ಪ್ರಧಾನಿ ನರೇಂದ್ರ ಮೋದಿ ಇನ್ನೂ ಇಪ್ಪತ್ತು ರ‍್ಯಾಲಿ ನಡೆಸಲಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಮುಖ ಆಕರ್ಷಣೆಯಾದ್ದರಿಂದ, ಇನ್ನೂ 20 ಬಾರಿ ಮೋದಿ ರಾಜ್ಯಕ್ಕೆ ಬರಲಿದ್ದು ಚುನಾವಣ ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿಯವರ ರ‍್ಯಾಲಿಗಳು ಬಹುತೇಕ ಕಾಂಗ್ರೆಸ್ ಹಾಗೂ ಜೆಡಿಎಸ್ ಭದ್ರಕೋಟೆಯ ಕ್ಷೇತ್ರಗಳಲ್ಲೇ ಹೆಚ್ಚು ನಡೆಯಲಿದ್ದು, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಪ್ರಮುಖವಾಗಿ “ಟಾರ್ಗೆಟ್’ ಮಾಡಲಾಗಿದೆ. ಮೇ 6ರಿಂದ 8ರ ವರೆಗೆ ಹೆಚ್ಚು ರ‍್ಯಾಲಿಗಳನ್ನು ಆಯೋಜಿಸಲಾಗಿದ್ದು, ಅವೆಲ್ಲವೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲವಾಗಿರುವ ಪ್ರದೇಶಗಳಾಗಿರಲಿವೆ ಎಂದು ಮೂಲಗಳು ತಿಳಿಸಿವೆ.
ಶತಾಯಗತಾಯ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಶಪಥದೊಂದಿಗೆ ಅಖಾಡಕ್ಕಿಳಿದಿರುವ ಬಿಜೆಪಿ, ಪಕ್ಷದ “ಪ್ರಧಾನ ಹಾಗೂ ಸ್ಟಾರ್ ಪ್ರಚಾರಕ’ರಾಗಿರುವ ಪ್ರಧಾನಮಂತ್ರಿ ಮೋದಿಯವರಿಂದ 20 ರ್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದೆ.
ಮೇ 10ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮೇ 10ರೊಳಗಾಗಿ ಮೋದಿ ರಾಜ್ಯಕ್ಕೆ ಸರಣಿ ಭೇಟಿ ನೀಡಲಿದ್ದು, 20ರಷ್ಟು ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿಯೊಳಗೆ ಬಣಗಳ ಕಿತ್ತಾಟ, ಸರಕಾರದ ವಿರುದ್ಧ ಆಡಳಿತವಿರೋಧಿ ಅಲೆ ಮತ್ತಿತರ ಬೆಳವಣಿಗೆಗಳು ಹೊಗೆಯಾಡುತ್ತಿರುವ ಕಾರಣ, ಸದ್ಯಕ್ಕೆ ರಾಜ್ಯ ಬಿಜೆಪಿಗೆ “ಮೋದಿ ಮ್ಯಾಜಿಕ್ ಬಿಟ್ಟರೆ ಬೇರೆ ದಾರಿಯಿಲ್ಲ’ ಎಂಬಂತಾಗಿದೆ. ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದರೆ, ಮೋದಿಯೇ ಅನಿವಾರ್ಯ ಎಂಬ ಚಿಂತನೆಯೊಂದಿಗೆ ಬಿಜೆಪಿ ರಾಜ್ಯ ಘಟಕ ಪ್ರಚಾರದ ಕಾರ್ಯತಂತ್ರ ರೂಪಿಸಿದೆ.
6 ಭಾಗಗಳಾಗಿ ವರ್ಗೀಕರಣ
ಪ್ರಚಾರದ ದೃಷ್ಟಿಯಿಂದ ರಾಜ್ಯವನ್ನು ಒಟ್ಟು 6 ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ಇಂಥ ಪ್ರತೀ ವಿಭಾಗದಲ್ಲೂ ತಲಾ 3 ಕಡೆ ಮೋದಿ ರ‍್ಯಾಲಿ ಆಯೋಜಿಸುವುದು ಬಿಜೆಪಿಯ ಯೋಜನೆ. ಈ ಪೈಕಿ, ಕೆಲವು ಪ್ರದೇಶಗಳಲ್ಲಿ, ಉದಾಹರಣೆಗೆ 40 ಕ್ಷೇತ್ರಗಳಿರುವಂಥ ಹೈದರಾಬಾದ್-ಕರ್ನಾಟಕದಂಥ ಪ್ರದೇಶಗಳಲ್ಲಿ ಪ್ರಧಾನಿ ಮೋದಿಯವರಿಂದ ಹೆಚ್ಚಿನ ಸಂಖ್ಯೆಯ ಪ್ರಚಾರ ರ‍್ಯಾಲಿಗಳನ್ನು ನಡೆಸುವ ಲೆಕ್ಕಾಚಾರವನ್ನೂ ಪಕ್ಷ ಹಾಕಿಕೊಂಡಿದೆ.
ಕಲ್ಯಾಣ ಕರ್ನಾಟಕದವರೇ ಆದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿ ಎಐಸಿಸಿ ಅಧ್ಯಕ್ಷ ಹುದ್ದೆಗೇರಿರುವ ಕಾರಣ, ಅವರಿಗೂ ಈ ಪ್ರದೇಶ ಪ್ರತಿಷ್ಠೆಯ ಕಣವಾಗಿದೆ. ಈ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸೀಟುಗಳನ್ನು ಗೆಲ್ಲಿಸಿಕೊಡುವ ಹೊಣೆಗಾರಿಕೆಯೂ ಅವರಿಗಿದೆ. ಕಳೆದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಚುನಾವಣೆಗೆ ಮುಹೂರ್ತ ನಿಗದಿಯಾಗುವ ಮುನ್ನವೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸವನ್ನು ನೆರವೇರಿಸಿದ್ದಾರೆ. ಅಲ್ಲದೇ ಹುಬ್ಬಳ್ಳಿ, ಮಂಡ್ಯ ಸೇರಿದಂತೆ ಒಟ್ಟು 7 ಕಡೆ ರ‍್ಯಾಲಿ, ರೋಡ್‌ಶೋಗಳನ್ನೂ ನಡೆಸುವ ಮೂಲಕ ರಾಜ್ಯದ ಜನರನ್ನು ತಮ್ಮ ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದಾಗ, ಪ್ರತೀ ಬಾರಿಯೂ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ರ‍್ಯಾಲಿ, ರೋಡ್ ಶೋ ನಡೆದಲ್ಲೆಲ್ಲ ಜನಸಾಗರ ಹರಿದುಬಂದಿದೆ. ಇದು ಬಿಜೆಪಿಗೆ ಪ್ಲಸ್ ಪಾಯಿಂಗ್ ಆಗಿ ಪರಿಣಮಿಸಿದ್ದು, ಮತದಾನದ ದಿನದವರೆಗೂ ಇದನ್ನು ಮುಂದುವರಿಸಿಕೊಂಡು ಹೋಗುವುದು ರಾಜ್ಯ ನಾಯಕರ ಲೆಕ್ಕಾಚಾರವಾಗಿದೆ.
ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿರುವ ಕಾರಣ ಮುಂದಿನ ದಿನಗಳಲ್ಲಿ ಪ್ರಚಾರ ಮತ್ತಷ್ಟು ಕಾವೇರಲಿದ್ದು, ಪ್ರಧಾನಿ ಮೋದಿ ಮಾತ್ರವಲ್ಲದೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು, ಕೇಂದ್ರ ಸಚಿವರು ಕೂಡ ರಾಜ್ಯದಲ್ಲಿ ಠಿಕಾಣಿ ಹೂಡುವ ಸಾಧ್ಯತೆಯಿದೆ.
ಮೋದಿ ಹವಾ
* ಮುಂದಿನ 37 ದಿನಗಳಲ್ಲಿ 20ಕ್ಕೂ ಹೆಚ್ಚು ರ‍್ಯಾಲಿ
* ಮೇ 6-8ರ ನಡುವೆ ಕಾಂಗ್ರೆಸ್-ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಪ್ರಚಾರ
* ಪ್ರಚಾರಕ್ಕಾಗಿ ರಾಜ್ಯವನ್ನು 6 ವಿಭಾಗಗಳಾಗಿ ವರ್ಗೀಕರಣ
* ಪ್ರತೀ ವಿಭಾಗದಲ್ಲೂ ಮೋದಿಯವರಿಂದ ತಲಾ 3 ರ‍್ಯಾಲಿ
30 ಕಾರ್ಯಕ್ರಮಗಳಲ್ಲಿ ಭಾಗಿ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದಲ್ಲಿ ಹತ್ತು ದಿನಗಳಲ್ಲಿ ರ‍್ಯಾಲಿ, ರೋಡ್ ಶೋ, ಬಹಿರಂಗ ಸಮಾವೇಶ ಎಲ್ಲವೂ ಸೇರಿ 30 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಆದರೆ, ನಿರ್ದಿಷ್ಟ ದಿನಾಂಕ ಹಾಗೂ ಕಾರ್ಯಕ್ರಮದ ಸ್ಥಳ ಇನ್ನೂ ನಿಗದಿಯಾಗಿಲ್ಲ. ಕೇಂದ್ರ ನಾಯಕರ ಜತೆ ರಾಜ್ಯ ನಾಯಕರು ಸಂಪರ್ಕದಲ್ಲಿದ್ದು ರೂಪು-ರೇಷೆ ಸಿದ್ಧಪಡಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.