ರಜೆಯಲ್ಲಿ ತೆರಳಿದ್ದ ಯೋಧ ಶವವಾಗಿ ಪತ್ತೆ
Team Udayavani, Nov 26, 2017, 6:00 AM IST
ಶ್ರೀನಗರ: ಇಲ್ಲಿನ ಶೋಪಿಯಾನ್ ಪ್ರಾಂತ್ಯದಲ್ಲಿ ಉಗ್ರರು ಇರ್ಫಾನ್ ಅಹ್ಮದ್ ಮಿರ್ (23) ಎಂಬ ಯೋಧನನ್ನು ಹತ್ಯೆ ಮಾಡಿದ್ದಾರೆ. ಬಂದೂಕಿನ ಗುಂಡುಗಳು ತಗುಲಿರುವ ಅವರ ಮೃತದೇಹ ಶೋಪಿಯಾನ್ ವಾತು¾ಲ್ಲಾ ಕೀಗಮ್ ಪ್ರಾಂತ್ಯದಲ್ಲಿ ಶನಿವಾರ ಪತ್ತೆಯಾಗಿದೆ.
ಶೋಪಿಯಾನ್ ಪ್ರಾಂತ್ಯದ ಸೆಜಾನ್ ಕೀಗಮ್ನಲ್ಲಿ ವಾಸವಾಗಿದ್ದ ಇರ್ಫಾನ್ ಅವರನ್ನು ಅಡ್ಡಗಟ್ಟಿದ ಉಗ್ರರು ಆನಂತರ ಗುಂಡು ಹಾರಿಸಿ ಹತ್ಯೆಗೈದಿರಬಹುದೆಂದು ಸೇನಾ ಮೂಲಗಳು ಶಂಕಿಸಿವೆ. ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇರ್ಫಾನ್ ಅವರು 10 ದಿನಗಳ ರಜೆಯಲ್ಲಿ ಶೋಪಿಯಾನ್ನಲ್ಲಿರುವ ತಮ್ಮ ಮನೆಗೆ ಆಗಮಿಸಿದ್ದರು. ಶುಕ್ರವಾರ ಸಂಜೆ ನಂತರ ಅವರು ಕಣ್ಮರೆಯಾಗಿದ್ದರು. ಶನಿವಾರ ಮನೆಯಿಂದ ಸ್ವಲ್ಪ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಪಕ್ಕದಲ್ಲೇ ಅವರ ಕಾರು ಕೂಡ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಂಡನೆ: ಯೋಧನ ಹತ್ಯೆಯನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ. ಟ್ವಿಟರ್ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಮುಫ್ತಿ, “”ಇರ್ಫಾನ್ ಅವರ ಹತ್ಯೆಯು, ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ನಡೆಸುತ್ತಿರುವ ಯತ್ನ ಗಳಿಗೆ ಯಾವುದೇ ಧಕ್ಕೆ ತಾರದು” ಎಂದು ತಿಳಿಸಿದ್ದಾರೆ. ಒಮರ್ ಅಬ್ದುಲಾ ಕೂಡಾ ಟ್ವಿಟರ್ನಲ್ಲೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, “”ಯೋಧ ಇರ್ಫಾನ್ ಹತ್ಯೆ ಖಂಡನೀಯ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.