ಕಾಶ್ಮೀರ: ISIS ಕುತಂತ್ರ ಅನುಸರಿಸುತ್ತಿರುವ ಪಾಕ್; ಡ್ರೋನ್ ಮೂಲಕ ಬಾಂಬ್, ಶಸ್ತ್ರಾಸ್ತ್ರ
Team Udayavani, Oct 21, 2020, 5:58 AM IST
ಸಾಂದರ್ಭಿಕ ಚಿತ್ರ
ಶ್ರೀನಗರ/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಸದಾ ತಕರಾರು ತೆಗೆಯುತ್ತಲೇ ಇರುವ ನೆರೆಯ ಪಾಕಿಸ್ಥಾನವು ಈಗ ಡ್ರೋನ್ ಮೂಲಕ ಬಾಂಬ್ ದಾಳಿ ನಡೆಸುವ ತಂತ್ರ ಅನುಸರಿಸಲು ಮುಂದಾಗಿದೆ.
ಐಸಿಸ್ ಉಗ್ರ ಸಂಘಟನೆಯು ಇರಾಕ್‌ನಲ್ಲಿ ಸೇನೆಯ ಮೇಲೆ ದಾಳಿ ನಡೆಸಲು ಬಾಂಬ್ ಮತ್ತು ಇತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಡ್ರೋನ್ ಮೂಲಕ ಕಳುಹಿಸಿ ದಾಳಿ ಸಂಘಟಿಸುತ್ತಿತ್ತು. ಅದೇ ಮಾದರಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅನುಸರಿಸಲು ಪಾಕ್ ಮುಂದಾಗಿದೆ. ಈ ನಿಟ್ಟಿನಲ್ಲಿ ಪಾಕ್ ಗುಪ್ತಚರ ಸಂಸ್ಥೆ ಐಎಸ್‌ಐಯು ಉಗ್ರರಿಗೆ ತರಬೇತಿ ನೀಡಲಾರಂಭಿಸಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಚರ್ಚೆಯೂ ನಡೆದಿದೆ
ಐಎಸ್‌ಐಯು ಇಂಥ ಕುಕೃತ್ಯ ನಡೆಸಲು ಉಗ್ರ ಸಂಘಟನೆ ಲಷ್ಕರ್-ಎ-ತಯ್ಯ ಬಾ, ಜೈಶ್-ಎ-ಮೊಹಮ್ಮದ್ ಜತೆಗೆ ಸಭೆಯನ್ನೂ ನಡೆಸಿದೆ. ಪಂಜಾಬ್ ಪ್ರಾಂತ್ಯದಲ್ಲಿ ಎಪ್ರಿಲ್‌ನಲ್ಲಿ ಈ ಸಭೆ ನಡೆದಿತ್ತು. ಇದಾದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಜಿಲ್ಲೆಯಲ್ಲಿ ಮತ್ತೂಂದು ಸಭೆಯೂ ನಡೆದಿತ್ತು.
ನಾಲ್ವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಕೊಲ್ಲಲಾಗಿದೆ. ಇದ ರೊಂದಿಗೆ ಎರಡು ದಿನಗಳ ಅವಧಿಯಲ್ಲಿ ಅಲ್ಲಿ ಒಟ್ಟು ಐವರು ಉಗ್ರರನ್ನು ಕೊಂದಂತಾಗಿದೆ.
ಉಗ್ರರ ಯೋಜನೆಯೇನು?
– 5 ಕೆಜಿವರೆಗಿನ ಸ್ಫೋಟಕ ಒಯ್ಯಬಲ್ಲ ಕ್ವಾಡೋ ಕಾಪ್ಟರ್ ಡ್ರೋನ್‌ಗಳ ಬಳಕೆ. ಇವುಗಳಿಗೆ ಮೂರು ಕಿ.ಮೀ. ದೂರ ಹಾರಾಡಬಲ್ಲ ಸಾಮರ್ಥ್ಯ ಇರುತ್ತದೆ.
– ಐಸಿಸ್ ಇಂಥ ಯೋಜನೆಯಲ್ಲಿ ಯಶ ಪಡೆದಿರುವುದರಿಂದ ಅಮೆರಿಕದ ಡ್ರೋನ್ ಉತ್ಪಾದಕರು ಇದಕ್ಕೆ ತಿರುಗೇಟು ನೀಡುವ ವ್ಯವಸ್ಥೆ ಕಂಡುಕೊಂಡಿದ್ದಾರೆ.
– ಐಸಿಸ್‌ನ ಯಶಸ್ಸಿನಿಂದ ಇತರ ಸಂಘಟನೆಗಳೂ ಇದರತ್ತ ಆಸಕ್ತಿ ವಹಿಸಿವೆ.
– ಪಾಕ್ ಈಗ ಇದೇ ಕಾರ್ಯತಂತ್ರ ಅನುಸರಿಸಲು ಮುಂದಾಗಿದೆ. ಎಲ್‌ಒಸಿಯಲ್ಲಿ ಬಿಎಸ್‌ಎಫ್ ಮತ್ತು ಸೇನೆ ಈ ಹಿಂದೆ ಹಲವು ಬಾರಿ ಪಾಕ್ ಸೇನೆಯು ಡ್ರೋನ್ ಮೂಲಕ ಕಳುಹಿಸಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.