ಆಗಸ್ಟ್ 15- ಎಲ್ಲರ ಚಿತ್ತ ಜಮ್ಮು-ಕಾಶ್ಮೀರದತ್ತ; ಕಣಿವೆ ರಾಜ್ಯದಲ್ಲಿ ಸೇನೆಯ ಸರ್ಪಗಾವಲು
Team Udayavani, Aug 14, 2019, 10:20 AM IST
ಜಮ್ಮು-ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ನಂತರ ಎದುರಾಗುತ್ತಿರುವ ಸ್ವಾತಂತ್ರ್ಯೋತ್ಸ ಆಚರಿಸಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಲಾಲ್ ಚೌಕ್ ಅನ್ನು ರಾಜಕೀಯದ ಸ್ಥಳವನ್ನಾಗಿ ಮಾಡಬೇಡಿ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ ಮಲಿಕ್ ಹೇಳಿದ್ದಾರೆ.
ಕಣಿವೆ ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು:
ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಬಾರಿ ಶ್ರೀನಗರದ ಲಾಲ್ ಚೌಕ್ ನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಸಾಧ್ಯತೆ ಇದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ.
ಅಲ್ಲದೇ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ನಂತರ ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ತೆರವುಗೊಳಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಆಗಸ್ಟ್ 4ರಿಂದ ಭಾರೀ ಭದ್ರತೆಯಿಂದಾಗಿ ಗುಂಪುಗೂಡುವುದು, ಸಂಚಾರ ಸೇರಿದಂತೆ ವಿವಿಧ ಚಟುವಟಿಕೆಯನ್ನು ನಿರ್ಬಂಧಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಮುಫ್ತಿಯನ್ನು ಸೇರಿದಂತೆ 400 ರಾಜಕೀಯ ಮುಖಂಡರನ್ನು ವಶದಲ್ಲಿರಿಸಲಾಗಿದೆ. ಬೀದಿ, ಬೀದಿಯಲ್ಲಿ 50 ಸಾವಿರಕ್ಕೂ ಹೆಚ್ಚು ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಯಾವುದೇ ಜೀವ ಹಾನಿ ಸಂಭವಿಸಬಾರದು ಎಂಬ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಜನರ ರಕ್ಷಣೆ ಮತ್ತು ಭದ್ರತೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಎನ್ ಡಿಟಿವಿ ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.