ರಾಷ್ಟ್ರಗೀತೆ ಅಗೌರವದ ವಿಡಿಯೋ ಫೇಕ್: ಕಾಶ್ಮೀರ ವಿವಿ ಸ್ಪಷ್ಟನೆ
Team Udayavani, Jul 5, 2018, 3:58 PM IST
ಹೊಸದಿಲ್ಲಿ : ಘಟಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಗೀತೆ ನುಡಿಸಲಾದಾಗ ಕುಳಿತೇ ಇರುವ ಮೂಲಕ ಕೆಲವು ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಅಗೌರವ ತೋರಿಸಿದರೆಂಬುದನ್ನು ಕಾಣಿಸುವ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ “ಫೇಕ್’ ಎಂದು ಕಾಶ್ಮೀರದ ಸೆಂಟ್ರಲ್ ಯುನಿವರ್ಸಿಟಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋ ಫೇಕ್ ಆಗಿದೆ. ವಾಸ್ತವದಲ್ಲಿ ರಾಷ್ಟ್ರ ಗೀತೆ ನುಡಿಸಲಾದಾಗ ಮತ್ತು ಶೈಕ್ಷಣಿಕ ಮೆರವಣಿಗೆ ನಡೆದಾಗ ಎಲ್ಲ ವಿದ್ಯಾರ್ಥಿಗಳು ಮತ್ತು ಆಹ್ವಾನಿತ ಗಣ್ಯರು ನಿಂತುಕೊಂಡೇ ಇದ್ದರು. ಯಾರೂ ರಾಷ್ಟ್ರಗೀತೆಗೆ ಅಗೌರವ ತೋರಿಲ್ಲ’ ಎಂದು ವಿವಿ ಪ್ರಕಟನೆ ಹೇಳಿದೆ.
ಕಾಶ್ಮೀರ ವಿಶ್ವವಿದ್ಯಾಲಯದ ಘಟಿಕೋತ್ಸವ ಜು.4ರಂದು ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.