“ಸಾಮಾಜಿಕ ಜಾಲತಾಣಗಳ ಮೂಲಕ ಹಿಂಸೆಗೆ ಪ್ರೇರಣೆ’
Team Udayavani, Jun 11, 2017, 10:35 AM IST
ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಗಳನ್ನು ಹರಿಬಿಡುತ್ತಿರುವುದರ ಪರಿಣಾಮ ಜಮ್ಮು-ಕಾಶ್ಮೀರದ ಯುವಕರು ಹಿಂಸಾಚಾರದಂತಹ ಕೃತ್ಯಗಳತ್ತ ಒಲವು ತೋರುತ್ತಿದ್ದಾರೆ. ಪ್ರಚೋದನೆಗೆ ಒಳಗಾಗುತ್ತಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಡೆಹ್ರಾಡೂನ್‌ನ ಸೇನಾ ಅಕಾಡೆಮಿ ಆಯೋಜಿಸಿದ ಪರೇಡ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂಥ ಕೃತ್ಯಗಳ ವಿರುದ್ಧ ಸೇನಾ ಪಡೆಗಳು ಸೂಕ್ತ ಯೋಜನೆ ರೂಪಿಸಿ ಕಾರ್ಯಾಚರಣೆಗೆ ಇಳಿಯಬೇಕಾಗಿ ಬಂದಿದೆ. ಭಯೋತ್ಪಾ ದಕರ ವಿರುದ್ಧದ ಹೋರಾಟವೇ ದೇಶಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಉಗ್ರರ ಉಪಟಳವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಇದೇ ವೇಳೆ, ಕಾರ್ಯಾಚರಣೆ ವೇಳೆ ಸಾರ್ವಜನಿಕರನ್ನು ನೇರವಾಗಿ ಎದುರಿಸಬೇಕಾಗಿ ಬರುತ್ತದೆ. ಮಹಿಳಾ ಪ್ರತಿಭಟ ನಕಾರರನ್ನೂ ಎದುರಿಸಬೇಕಾಗುತ್ತದೆ. ಅಂಥ ಸಂದರ್ಭಗಳಲ್ಲಿ ಅವರನ್ನು ಎದುರಿಸಲು ಸೇನೆಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಬೇಕಾಗುತ್ತದೆ ಎಂದೂ ರಾವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.