ಉಗ್ರರ ಗುಂಡೇಟಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ
Team Udayavani, Feb 26, 2023, 12:18 PM IST
ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ. ಭಾನುವಾರ ( ಫೆ.26 ರಂದು) ಉಗ್ರರ ದಾಳಿಗೆ ಸಂಜಯ್ ಶರ್ಮಾ (40) ಎಂಬಾತ ಬಲಿಯಾಗಿದ್ದಾರೆ.
ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಸಂಜಯ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ತೀವ್ರ ಗಾಯಗೊಂಡ ಸಂಜಯ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಗಂಭೀರ ಗಾಯಗೊಂಡ ಕಾರಣ ಅವರು ಮೃತಪಟ್ಟಿದ್ದಾರೆ. ಜಮ್ಮು & ಕಾಶ್ಮೀರದ ಬ್ಯಾಂಕ್ ವೊಂದರಲ್ಲಿ ಸೆಕ್ಯೂರಿಟ್ ಗಾರ್ಡ್ ಆಗಿ ಸಂಜಯ್ ಶರ್ಮಾ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಉಗ್ರರು ಸಂಜಯ್ ಸರ್ಮಾ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪುಲ್ವಾಮದ ಮಾರುಕಟ್ಟೆಯಲ್ಲಿ ತೆರಳುತ್ತಿದ್ದ ವೇಳೆ ನಡೆಸಿದ ದಾಳಿಯ ಪರಿಣಾಮ ಅವರು ಮೃತಪಟ್ಟಿದ್ದಾರೆ. ಪೊಲೀಸರು ದಾಳಿಯಾದ ಪ್ರದೇಶದಲ್ಲಿ ಸುತ್ತುವರೆದು ಉಗ್ರರ ಸೆರೆಗೆ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.
ರಾಹುಲ್ ಭಟ್ ಹತ್ಯೆ ಖಂಡಿಸಿ ಕಳೆದ ಕೆಲ ಸಮಯದಿಂದ ಕಾಶ್ಮೀರಿ ಪಂಡಿತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ವೇಳೆಯಲ್ಲೇ ಮತ್ತೊಂದು ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ.
Terrorists fired upon one civilian from minority namely Sanjay Sharma from Pulwama while on way to local market. He was shifted to hospital however, he succumbed to injuries. There was Armed guard in his village. Area cordoned off. Details shall follow: Kashmir Police pic.twitter.com/cX5m9LaXdf
— ANI (@ANI) February 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.