ಕಾರ್ಯಕರ್ತರಿಗೆ ಮೋದಿ ಫೋನ್
Team Udayavani, Oct 31, 2017, 7:35 AM IST
ಅಹ್ಮದಾಬಾದ್: ಗುಜರಾತ್ ಚುನಾವಣೆ ರಂಗೇರತೊಡಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದಾಗಿ ಬಿಜೆಪಿ ಕಾರ್ಯಕರ್ತರ ಜತೆಗೆ ಫೋನ್ ಮೂಲಕ ಮಾತುಕತೆ ನಡೆಸುತ್ತಿದ್ದಾರೆ.
ಇದು ಬಿಜೆಪಿಯ ತಳಮಟ್ಟದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ. ಇದುವರೆಗೆ 8ರಿಂದ 10 ಕಾರ್ಯಕರ್ತರಿಗೆ ಪ್ರಧಾನಿ ಫೋನ್ ಮಾಡಿದ್ದಾರೆ. “ಫೋನ್ ಎ ಫ್ರೆಂಡ್’ ಎಂಬ ಶೀರ್ಷಿಕೆಯಡಿ ಅದನ್ನು ನಡೆಸಲಾಗುತ್ತಿದೆ. ಅದು ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ಜನಪ್ರಿಯತೆ ಪಡೆಯುತ್ತಿರುವುದರಿಂದ ಬಿಜೆಪಿ ಈ ರಣತಂತ್ರ ಪ್ರಯೋಗಿಸಿದೆ.
ಜಾದೂಗಾರರು: ಇದೇ ವೇಳೆ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗುವ ಎಲ್ಲ ಕಾರ್ಯ ಕ್ರಮಗಳಲ್ಲಿ ಜಾದೂ ಗಾರರು ತಮ್ಮ ಕೈಚಳಕ ಪ್ರದರ್ಶಿ ಸಲಿ ದ್ದಾರೆ. ಅದಕ್ಕಾಗಿ 50 ಮಂದಿ ಜಾದೂ ಗಾರರು ನಿಯೋಜಿತರಾಗಿ ದ್ದಾರೆ. ಡಿ.8ರಿಂದ ಕೇಂದ್ರ ಗುಜ ರಾತ್ ನಲ್ಲಿ ಇಂಥ ಕಾರ್ಯಕ್ರಮ ನಡೆಸಲಾಗುತ್ತದೆ.
ಶಿಸ್ತು ಕ್ರಮದ ಅಧಿಕಾರಿಗಳು ಬೇಡ: ಮತ್ತೂಂದು ಬೆಳವಣಿಗೆಯೊಂದರಲ್ಲಿ ಆಯಾ ಇಲಾಖೆಗಳಿಂದ ಶಿಸ್ತಿನ ಕ್ರಮಕ್ಕೆ ಒಳಗಾಗಿರುವ ಯಾವುದೇ ಅಧಿಕಾರಿಯನ್ನು ಚುನಾವಣ ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಬೇಡ ಎಂದು ಸುಪ್ರೀಂಕೋರ್ಟ್ ಕೇಂದ್ರ ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.