ಕೆಸಿಆರ್ ಸ್ವಗ್ರಾಮದ ಕುಟುಂಬಗಳಿಗೆ 10 ಲಕ್ಷ ರೂ.!
Team Udayavani, Jul 23, 2019, 5:00 AM IST
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ತನ್ನ ಗ್ರಾಮದಲ್ಲಿನ ಎಲ್ಲ 2 ಸಾವಿರ ಕುಟುಂಬ ಗಳಿಗೂ ತಲಾ 10 ಲಕ್ಷ ರೂ. ನೀಡಲು ನಿರ್ಧರಿಸಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಚಿಂತಮಡಕ್ಕ ಗ್ರಾಮದಲ್ಲಿ ಸದ್ಯ 2 ಸಾವಿರ ಕುಟುಂಬಗಳಿವೆ. ಇದೇ ಗ್ರಾಮದಲ್ಲಿ ಕೆಸಿಆರ್ ಜನಿಸಿದ್ದು, ಸೋಮವಾರ ಇಲ್ಲಿಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಕೆಸಿಆರ್ ಈ ಘೋಷಣೆ ಮಾಡಿದ್ದಾರೆ. ಇದಲ್ಲದೇ, ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣ ಮತ್ತು ಇಡೀ ಗ್ರಾಮಕ್ಕೆ ಒಳಚರಂಡಿ ವ್ಯವಸ್ಥೆಯನ್ನು ಮಾಡಿ ಕೊಡುವು ದಾಗಿಯೂ ಅವರು ಘೋಷಿಸಿದ್ದಾರೆ.
ಮುಂದಿನ 6 ತಿಂಗಳಲ್ಲಿ ಎಲ್ಲ ಕೆಲಸವನ್ನೂ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ ಅವರು, ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗುತ್ತದೆ ಎಂದಿದ್ದಾರೆ. ಆರು ತಿಂಗಳ ಅನಂತರ ಆಗಮಿಸಿ ಎಲ್ಲ ಯೋಜನೆಗಳನ್ನೂ ಉದ್ಘಾಟಿಸುವುದಾಗಿ ಅವರು ಹೇಳಿದ್ದಾರೆ. ಇಲ್ಲಿ ಕಲ್ಯಾಣ ಮಂಟಪ, ರಸ್ತೆ ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆ ಯನ್ನೂ ಜಾರಿಗೊಳಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.