ಇಂದು 2ನೇ ಬಾರಿಗೆ ಕೆಸಿಆರ್ ಪ್ರಮಾಣ
Team Udayavani, Dec 13, 2018, 6:00 AM IST
ಹೈದರಾಬಾದ್: ತೆಲಂಗಾಣದಲ್ಲಿ ಭಾರೀ ಜನ ಬೆಂಬಲದೊಂದಿಗೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗೆ ಕೆ.ಚಂದ್ರಶೇಖರ್ ರಾವ್ ಅವರೇ ಪ್ರಶ್ನಾತೀತ ನಾಯಕ. ಈಗ ಎರಡನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ರಾಜ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಪ್ರಮಾಣ ಬೋಧಿಸಲಿದ್ದಾರೆ. ಇದೇ ವೇಳೆ ಕೆಲವು ಶಾಸಕರೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಸಿದ್ದಿ ಪೇಟ್ ಜಿಲ್ಲೆಯ ಗಾಜ್ವೆಲ್ ಕ್ಷೇತ್ರದಿಂದ 58,290 ಮತಗಳ ಅಂತರದಿಂದ ಮಗ ದೊಮ್ಮೆ ವಿಧಾನಸಭೆ ಪ್ರವೇಶಿಸಿರುವ ರಾವ್, ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ತೆಕ್ಕೆಗೆ ಹಾಕಿಕೊಂಡಿರುವ ಟಿಆರ್‌ಎಸ್‌ಗೆ ವಿಧಾನಸಭೆಯಲ್ಲಿ ಆನೆ ಬಲ. ಊಹಿಸಿಕೊಳ್ಳಲಿಕ್ಕೂ ಆಗದ ರೀತಿಯಲ್ಲಿ ಜಯಭೇರಿ ಭಾರಿಸಿದೆ.
ಸೋತ ಆಘಾತದಿಂದ ಆಸ್ಪತ್ರೆಗೆ ದಾಖಲು
ಜಯದ ಕನಸು ಕಂಡು ಸೋಲುಕಂಡ ಎರಡು ಕ್ಷೇತ್ರದ ಪ್ರಮುಖ ಅಭ್ಯರ್ಥಿಗಳು ಆಘಾತಕ್ಕೊಳಗಾಗಿ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಲಗೋಂಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊಮಾಟಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಪಲೈರ್ ಕ್ಷೇತ್ರದ ಟಿಆರ್‌ಎಸ್ ಅಭ್ಯರ್ಥಿ ತುಮ್ಮಳ ನಾಗೇಶ್ವರ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ನಾಯಕರು ಎದೆಯಲ್ಲಿ ಸಣ್ಣ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ರಾಜ್ಯ ರಚನೆಯ ರೂವಾರಿಗೆ ಮನ್ನಣೆ
2014ರಲ್ಲಿ ಆಂಧ್ರಪ್ರದೇಶದಿಂದ ಬೇರ್ಪಟ್ಟ ಬಳಿಕ ತೆಲಂಗಾಣ ರಾಜ್ಯದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಸಂಸ್ಥಾಪಕರೂ ಹೌದು. ಇದಕ್ಕೂ ಮೊದಲು ಇದೇ ಕ್ಷೇತ್ರದಿಂದ ಆಂಧ್ರಪ್ರದೇಶ ವಿಧಾನಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಮೇದಕ್ ಕ್ಷೇತ್ರದಿಂದ ಒಮ್ಮೆ ಲೋಕಸೌಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಆರಂಭದಲ್ಲಿ ಮೇದಕ್‌ನ ಯೂತ್ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು, ಬಳಿಕ ಎನ್.ರಾಮ್ ರಾವ್ ಅವರ ಕಾಲದಲ್ಲಿ ತೆಲಗುದೇಶಂ ಪಕ್ಷಕ್ಕೆ ಸೇರಿಕೊಂಡಿದ್ದರು. ರಾವ್ ಹೈದರಾಬಾದ್ ವಿವಿಯ ಎಂಎ ಪದವೀಧರರಾಗಿದ್ದಾರೆ.
ಹಕ್ಕು ಮಂಡಿಸಿದ ಕಾಂಗ್ರೆಸ್
ಜೈಪುರದಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನೂತನ ಶಾಸಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ
ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಶಾಸಕಾಂಗ ಪಕ್ಷದ ನಾಯಕ ಆಯ್ಕೆಯ ಹೊಣೆಯನ್ನು ವಹಿಸಲಾಯಿತು. ಇದಾದ ಕೂಡಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಬಗ್ಗೆ ಹಕ್ಕು ಮಂಡಿಸಲಾಗಿದೆ. ಕಾಂಗ್ರೆಸ್ 99, ಬಿಜೆಪಿ 73, ಬಿಎಸ್‌ಪಿ 6, ಸಿಪಿಎಂ 2, ಆರ್‌ಎಲ್‌ಡಿ 1, ಪಕ್ಷೇತರರು 13, ಸ್ವತಂತ್ರ 6 ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ.
ಅಶೋಕ್ ಗೆಲ್ಹೋಟ್
ಅಶೋಕ್ ಗೆಲ್ಹೋಟ್, ರಾಜಸ್ಥಾನ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಷ್ಟ್ರ ರಾಜಕಾರಣದಲ್ಲೂ ಅನುಭವ ಹೊಂದಿರುವ ರಾಜಕಾರಣಿ. ಜೋದು³ರದವರಾದ ಗೆಲ್ಹೋಟ್, ಐದು ಬಾರಿ ಲೋಕಸಭೆ ಪ್ರವೇಶಿಸಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅಷ್ಟೇ ಅಲ್ಲ, ಎರಡು ಬಾರಿ ರಾಜಸ್ಥಾನ ಮುಖ್ಯಮಂತ್ರಿಯೂ ಆಗಿದ್ದರು.
ಯುವ ನಾಯಕ ಸಚಿನ್ ಪೈಲಟ್
ಸಚಿನ್ ಪೈಲಟ್, ಕಾಂಗ್ರೆಸ್‌ನ 40ರ ಆಸುಪಾಸಿನಲ್ಲಿರುವ ಯುವ ನಾಯಕ. ರಾಹುಲ್ ಗಾಂಧಿ ಅವರ ಆಪ್ತರಲ್ಲಿ ಒಬ್ಬರು. ಮೂಲತಃ ಉತ್ತರ ಪ್ರದೇಶದವರಾದರೂ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದು ರಾಜಸ್ಥಾನದಲ್ಲಿ. ಹಿರಿಯ ರಾಜಕಾರಣಿ ರಾಜೇಶ್ ಪೈಲಟ್ ಅವರ ಪುತ್ರ. 2009ರಲ್ಲಿ ಅಜ್ಮಿರ್ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭಾ ಅಭ್ಯರ್ಥಿಯಾಗಿ, 2014ರಲ್ಲಿ ಮತ್ತೂಮ್ಮೆ ಲೋಕಸಭೆಗೆ ಆಯ್ಕೆಯಾಗಿ ಕಾಂಗ್ರೆಸ್ ಪಾಳಯದಲ್ಲಿ ಚಿರಪರಿಚಿತರಾಗಿದ್ದಾರೆ. ಅಷ್ಟೇ ಅಲ್ಲ 2012ರಲ್ಲಿ ಕೇಂದ್ರ ವಿಮಾನಯಾನ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.