Delhi excise policy case: ಕೇಜ್ರಿವಾಲ್‌ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ


Team Udayavani, Apr 10, 2024, 11:50 PM IST

ಕೇಜ್ರಿವಾಲ್‌ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಎರಡು ಆಘಾತ ಎದುರಾಗಿದೆ. ಕೇಜ್ರಿವಾಲ್‌ರನ್ನು ಇ.ಡಿ. ಬಂಧಿಸಿದ್ದು ಸರಿಯಾಗಿದೆ ಎಂದು ಮಂಗಳವಾರ ದಿಲ್ಲಿ ಹೈಕೋರ್ಟ್‌ ಹೇಳಿತ್ತು. ಅದರ ಬೆನ್ನಲ್ಲೇ ಬುಧ
ವಾರ, ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ನಲ್ಲೂ ಹಿನ್ನಡೆಯಾಗಿದೆ. ಬಿಡುಗಡೆಗೆ ಮನವಿ ಮಾಡಿ, ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್‌, ಮಂಗಳವಾರ ದಿಲ್ಲಿ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸ ಬೇಕೆಂದು ಆಗ್ರಹಿಸಿದ್ದರು.

ಕೇಜ್ರಿವಾಲ್‌ ಪರವಾಗಿ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂ Ìಗೆ, ಅರ್ಜಿಯ ಪ್ರತಿಯನ್ನು ಇ-ಮೇಲ್‌ ಮಾಡಿ. ನಾನು ಆ ಬಳಿಕ ಅರ್ಜಿ ವಿಚಾರಣೆಯ ಸಂಬಂಧ ನಿರ್ಧರಿಸುವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ. ಇದಕ್ಕೂ ಮೊದಲು ಮನವಿ ಮಾಡಿದ ಸಿಂ Ì, ಈ ಅರ್ಜಿಯು ದಿಲ್ಲಿ ಮುಖ್ಯಮಂತ್ರಿಗೆ ಸಂಬಂಧಿಸಿದ್ದಾಗಿದೆ. ತ್ವರಿತ ವಿಚಾರಣೆ ಅಗತ್ಯವಿದೆ ಎಂದು ಹೇಳಿದ್ದರು.

ಬಂಧನ ಎತ್ತಿ ಹಿಡಿದ ದಿಲ್ಲಿ ಹೈಕೋರ್ಟ್‌
ತಮ್ಮ ಇ.ಡಿ. ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿ, ಕೇಜ್ರಿವಾಲ್‌ ಅವರನ್ನು ಇ.ಡಿ. ಬಂಧಿಸಿರುವುದು ಸರಿಯಾಗಿದೆ ಎಂದು ಹೇಳಿತ್ತು. ಹಲವು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ತನಿಖೆಗಾಗಿ ಅವರನ್ನು ಬಂಧಿಸದೇ ಬೇರೆ ಆಯ್ಕೆ ಇರಲಿಲ್ಲ ಎಂದು ನ್ಯಾ| ಸ್ವರ್ಣಕಾಂತ ಶರ್ಮಾ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರು ಇತರರೊಂದಿಗೆ ಈ ಹಗರಣದ ಸಂಚುಕೋರರು. ದಕ್ಷಿಣದ ಗುಂಪಿನಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿರುವುದು ದಾಖಲೆಗಳು ಹೇಳುತ್ತವೆ ಎಂದು 106 ಪುಟಗಳ ತೀರ್ಪಿನಲ್ಲಿ ತಿಳಿಸಲಾಗಿದೆ. ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಕೇಜ್ರಿವಾಲ್‌ ಅವರನ್ನು ಇ.ಡಿ. ಮಾ.21ರಂದು ಬಂಧಿಸಿತ್ತು.

ವಕೀಲರ ಭೇಟಿಗೆ ಹೆಚ್ಚಿನ ಸಮಯ: ಕೇಜ್ರಿ ಮನವಿಗೆ ತಿರಸ್ಕಾರ
ಮತ್ತೊಂದೆಡೆ, ತನ್ನ ನ್ಯಾಯವಾದಿಗಳನ್ನು ಭೇಟಿಯಾಗಲು ಹೆಚ್ಚಿನ ಸಮಯ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಕೋರ್ಟ್‌ ತಳ್ಳಿ ಹಾಕಿ, ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗುತ್ತದೆ ಎಂದು ಹೇಳಿದೆ. ಮನವಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಕಾವೇರಿ ಬವೇಜಾ, ಅರ್ಜಿದಾರರಿಗೆ ಕಾನೂನುಬದ್ಧವಾಗಿ ನೀಡಲಾದ ಅವಧಿಗಳನ್ನು ಬಳಸಿಕೊಳ್ಳುತ್ತಿಲ್ಲ. ಅವರು ಬೇರೆ ಉದ್ದೇಶಕ್ಕೆ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆಂಬ ಸಂಗತಿಯನ್ನು ಇಡಿ ಕೋರ್ಟ್‌ ಗಮನಕ್ಕೆ ತಂದಿದೆ ಎಂದು ಹೇಳಿದರು.

ಜೈಲು ಅಧಿಕಾರಿಗಳ ಮೇಲೆ ಒತ್ತಡ: ಸಂಜಯ್‌ ಸಿಂಗ್‌
ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಮತ್ತು ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಜತೆಗಿನ ಬಂಧಿತ ಸಿಎಂ ಕೇಜ್ರಿವಾಲ್‌ ಭೇಟಿ ರದ್ದಾದ ಹಿನ್ನೆಲೆಯಲ್ಲಿ ಆಪ್‌ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದೆ. ಈ ಕುರಿತು ಮಾತನಾಡಿರುವ ಆಪ್‌ ನಾಯಕ ಸಂಜಯ್‌ ಸಿಂಗ್‌, ಜೈಲು ಅಧಿಕಾರಿಗಳ ಮೇಲೆ ಒತ್ತಡವಿದ್ದು, ಕೇಜ್ರಿವಾಲ್‌ ಭೇಟಿಗೆ ಮೊದಲು ಅನುಮತಿ ನೀಡಿ, ಬಳಿಕ ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.