Arunachal Pradesh ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಕೇರಳದ ಮೂವರು; ಮಾಟಮಂತ್ರವೇ ಕಾರಣ?
Team Udayavani, Apr 3, 2024, 1:02 PM IST
ಇಟಾನಗರ(ಅರುಣಾಚಲ ಪ್ರದೇಶ): ಕೇರಳದ ದಂಪತಿ ಹಾಗೂ ಅವರ ಸ್ನೇಹಿತೆ ಅರುಣಾಚಲ ಪ್ರದೇಶದ ಹೊಟೇಲ್ ವೊಂದರಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ಕೊಟ್ಟಾಯಂ ಜಿಲ್ಲೆಯ ಆಯುರ್ವೇದ ವೈದ್ಯರಾದ ನವೀನ್ ಥಾಮಸ್, ಅವರ ಪತ್ನಿ ದೇವಿ ಬಿ ಎಂದು ಗುರುತಿಸಲಾಗಿದೆ. ಮೂರನೇ ವ್ಯಕ್ತಿಯನ್ನು ಶಾಲಾ ಶಿಕ್ಷಕಿ ಹಾಗೂ ತಿರುವನಂತಪುರಂ ನಿವಾಸಿ ಆರ್ಯ ಬಿ ನಾಯರ್ (29) ಎಂದು ಗುರುತಿಸಲಾಗಿದೆ.
ಈ ಸಂಬಂಧ ಕೇರಳ ಪೊಲೀಸರು ಮಂಗಳವಾರ(ಏ.2 ರಂದು) ತನಿಖೆಗೆ ಅರುಣಾಚಲ ಪ್ರದೇಶಕ್ಕೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ.
ಮಾರ್ಚ್ 28 ರಂದು ಈ ಮೂವರು ಹೊಟೇಲ್ ಗೆ ಚೆಕ್ ಇನ್ ಆಗಿದ್ದರು. ಚೆಕ್ ಇನ್ ಆದಾಗಿನಿಂದ ಕೋಣೆಯ ಹೊರಗೆ ಬಾರದಿರುವ ಕಾರಣಕ್ಕೆ ಸಿಬ್ಬಂದಿ ಏ.1 ರಂದು ಅವರ ರೂಮ್ ನತ್ತ ಹೋಗಿದ್ದು, ಅಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ.
ಆರ್ಯ ಬಿ ನಾಯರ್ ಬೆಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಮಣಿಕಟ್ಟಿನ ಗಾಯವಾಗಿದೆ. ದೇವಿ ಅವರ ಕುತ್ತಿಗೆ ಮತ್ತು ಮಣಿಕಟ್ಟಿಗೆ ತೀವ್ರ ಗಾಯಗಳಾಗಿದ್ದು, ಅವರು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನವೀನ್ ಥಾಮಸ್ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಮಣಿಕಟ್ಟಿನ ಮೇಲೆ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ತಂಡ ಮತ್ತು ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ತೆರಳಿ, ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ತನಿಖೆ ಆರಂಭಿಸಿದ್ದಾರೆ.
ವಿವಾಹಿತ ದಂಪತಿ ಮತ್ತು ಮಹಿಳೆಯ ಮೂವರ ನಡವಳಿಕೆಯಲ್ಲಿ ಅಸಹಜತೆ ಇದೆ ಎಂದು ತೋರುತ್ತಿದೆ ಆದರೆ ಅವರ ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರಿಶೀಲಿಸುವವರೆಗೆ ಯಾವುದನ್ನೂ ನಿರ್ಣಾಯಕವಾಗಿ ಹೇಳಲಾಗುವುದಿಲ್ಲ ಎಂದು ತಿರುವನಂತಪುರಂ ನಗರ ಪೊಲೀಸ್ ಕಮಿಷನರ್ ಸಿ ನಾಗರಾಜು ಹೇಳಿದ್ದಾರೆ.
ಇದರ ಹಿಂದೆ ಮಾಟಮಂತ್ರ ಇದೆ ಎಂದು ಹೇಳಲಾಗುತ್ತಿದ್ದು, ಆದರೆ ಪೊಲೀಸರು ಸಾಕ್ಷ್ಯವನ್ನೆಲ್ಲಾ ತರಿಸಿಕೊಂಡು ನೋಡಿದ ಮೇಲೆಯೇ ತನಿಖೆಯ ಬಳಿಕವಷ್ಟೇ ಅವರು, ಯಾಕೆ ಹೊಟೇಲ್‌ಗೆ ಹೋದರು, ಇದಕ್ಕೆ ಕಾರಣವೇನು, ಹೇಗೆ ಸಾವನ್ನಪ್ಪಿದ್ದಾರೆ ಎನ್ನುವುದನ್ನು ಹೇಳಲು ಸಾಧ್ಯವೆಂದು ಪೊಲೀಸರು ಹೇಳಿದ್ದಾರೆ.
ದಂಪತಿಗೆ 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಆಗಾಗ ತಂದೆ-ತಾಯಿಯನ್ನು ಭೇಟಿ ಮಾಡಲು ಬರುತ್ತಿದ್ದರು ಎಂದು ವರದಿ ತಿಳಿಸಿದೆ.
ಆರ್ಯ ಅವರ ಸಂಬಂಧಿಕರು ತಿರುವನಂತಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಕೇರಳದ ಪೊಲೀಸರು ನವೀನ್ ಮತ್ತು ದೇವಿಯೊಂದಿಗೆ ಆರ್ಯ ಅರುಣಾಚಲ ಪ್ರದೇಶಕ್ಕೆ ಹೋಗುವ ಮೊದಲು ಗುವಾಹಟಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.