Tragedy: ಮದುವೆಗೂ ಮುನ್ನ ಚಿನ್ನ, ಜಾಗ, ಕಾರಿಗೆ ಬೇಡಿಕೆ… ಮನನೊಂದ ಯುವ ವೈದ್ಯೆ ಆತ್ಮಹತ್ಯೆ
Team Udayavani, Dec 7, 2023, 10:45 AM IST
ತಿರುವನಂತಪುರಂ: ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಮಂಗಳವಾರ ಬೆಳಗ್ಗೆ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ವಿವರ: ಶಹಾನಾ ಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು, ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150 ಪವನ್ ಚಿನ್ನ, 15 ಎಕರೆ ಜಾಗ ಜೊತೆಗೆ ಬಿಎಂಡಬ್ಲ್ಯೂ ಕಾರು ನೀಡುವಂತೆ ಕೇಳಿಕೊಂಡಿದ್ದಾರೆ ಆದರೆ ಶಹಾನಾ ಮನೆಯವರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಉತ್ತಮವಾಗಿರಲಿಲ್ಲ, ಆದರೂ ಐದು ಎಕರೆ ಜಾಗ ಜೊತೆಗೆ ಕಾರು ನೀಡಲು ಶಹಾನಾ ಕುಟುಂಬ ಮುಂದಾಗಿತ್ತು ಆದರೆ ರುವೈಸ್ ಕುಟುಂಬದವರು ತಾವು ಹೇಳಿದ್ದಷ್ಟೇ ನೀಡಬೇಕೆಂದು ಹಠಹಿಡಿದಿದ್ದರು ಆದರೆ ಅಷ್ಟೊಂದು ವರದಕ್ಷಿಣೆ ನೀಡಲು ಆಗುವುದಿಲ್ಲ ಎಂದಾಗ ರುವೈಸ್ ಕುಟುಂಬ ಶಹಾನಾ ಮದುವೆ ವಿಚಾರದಿಂದ ದೂರ ಉಳಿಯಲು ಪ್ರಾರಂಭಿಸಿದ್ದಾರೆ ಇದರಿಂದ ಮನನೊಂದ ಶಹಾನಾ ತಾನು ಇದ್ದ ರೂಮಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇತ್ತ ಮಗಳು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ತಿಳಿಯುತ್ತಲೇ ಶಹಾನಾ ಪೋಷಕರು ಪೊಲೀಸ್ ಠಾಣೆಯಲ್ಲಿ ರುವೈಸ್ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸು ದಾಖಲಿಸಿದ್ದಾರೆ.
ಶಹಾನಾ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ರುವೈಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸರು ಈ ಪ್ರಕರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂದು ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಘಟನೆಯ ಬಳಿಕ ರುವೈಸ್ ಅವರನ್ನು ಪಿಜಿ ವೈದ್ಯರ ಸಂಘದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದ್ದು ತನಿಖೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ತನಿಖೆ ಮುಗಿಯುವವರೆಗೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು ಎಂದು ಕೆಎಂಪಿಜಿಎ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: Las Vegas: ನೆವಾಡಾ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ… ನಾಲ್ವರು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.