ಕೇರಳ ಪ್ರವಾಹ: 65,000 ಮಂದಿಯನ್ನು ರಕ್ಷಿಸಿದ್ದ ಮೀನುಗಾರರು

Team Udayavani, Aug 28, 2018, 6:00 AM IST

kerala-flood-27.jpg

ಕೊಚ್ಚಿ: ಕೇರಳದಲ್ಲಿ ಜಡಿ ಮಳೆ ಹಾಗೂ ಉಕ್ಕಿಹರಿದ ಪ್ರವಾಹಕ್ಕೆ ಎದೆಯೊಡ್ಡಿ ಮೀನುಗಾರರು ಜಲಾವೃತ ಪ್ರದೇಶಗಳಿಂದ 65,000 ಜನರನ್ನು ರಕ್ಷಿಸಿದ್ದರೆಂದು ಮೀನುಗಾರಿಕಾ ಸಚಿವೆ ಜೆ. ಮರ್ಸಿಕುಟ್ಟಿ ಅಮ್ಮ ತಿಳಿಸಿದ್ದಾರೆ.

ಅತಿಹೆಚ್ಚು ಹಾನಿಗೀಡಾದ ಪತ್ತನಂತಿಟ್ಟ ಜಿಲ್ಲೆಯೊಂದರಲ್ಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ ಜನರ ಪೈಕಿ ಶೇ. 70 ಮಂದಿಯನ್ನು ಸ್ಥಳೀಯ ಮೀನುಗಾರರು ಅತ್ಯಂತ ಪ್ರತಿಕೂಲಕರ ಸನ್ನಿವೇಶಗಳನ್ನು ಲೆಕ್ಕಿಸದೆ ರಕ್ಷಿಸಿದರೆಂದು ಅವರು ತಿಳಿಸಿದರು.

“ಧಾರಾಕಾರ ಮಳೆ ಹಾಗೂ ಉಕ್ಕೇರಿದ ಪ್ರವಾಹದ ಮುಂದೆ ಅಸೀಮ ಧೈರ್ಯ ಪ್ರದರ್ಶಿಸಿ ಮೀನುಗಾರರು 669 ಯಾಂತ್ರೀಕೃತ ದೋಣಿಗಳ ನೆರವಿನಿಂದ ಸುಮಾರು 65,000 ಮಂದಿಯನ್ನು ರಕ್ಷಿಸಿದರು’ ಎಂದವರು ಮೀನುಗಾರರನ್ನು ಗೌರವಿಸಲು ಇಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ಹೇಳಿದರು. 

ಸರಕಾರದ ಮನವಿಗೆ ಓಗೊಟ್ಟ ಮೀನುಗಾರರು ಎಲ್ಲ ಕಡೆಗಳಿಂದ ಧಾವಿಸಿ ಬಂದರು ಮತ್ತು ತಮ್ಮ ಯಾಂತ್ರೀಕೃತ ನಾಡ ದೋಣಿಗಳನ್ನು ಟ್ರಕ್‌ಗಳಲ್ಲಿ ಪ್ರವಾಹಪೀಡಿತ ಪ್ರದೇಶಗಳಿಗೆ ಒಯ್ದು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿದರೆಂದು ಸಚಿವೆ ಶ್ಲಾ ಸಿದರು. ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಅನೇಕ ಮೀನುಗಾರರನ್ನು ವಾಪಸ್‌ ಕರೆಸಿ ರಕ್ಷಣಾ ಕಾರ್ಯಾಚರಣೆಗಳಿಗೆ ಕಳುಹಿಸಲಾಯಿತು ಎಂದು ಕೂಡ ಅವರು ಹೇಳಿದರು.

“ಈ ಮೀನುಗಾರರಿಗೆ ಕೇರಳವು ಎಂದೆಂದಿಗೂ ಕೃತಜ್ಞವಾಗಿರುವುದು.  ನಾವು ಒಗ್ಗಟ್ಟಿನಿಂದ ಇದ್ದರೆ ಇಂಥ ಯಾವುದೇ ವಿಪತ್ತನ್ನು ಎದುರಿಸಬಲ್ಲೆವೆಂದು ನಾವು ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ’ ಎಂದು ಸಚಿವೆ ನುಡಿದರು. ಸಮಾಜದ ಎಲ್ಲ ವರ್ಗಗಳು ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಮೀನುಗಾರರನ್ನು ಮುಖ್ಯ ವಾಹಿನಿಗೆ ತರುವುದಕ್ಕೆ ಸರಕಾರ ಬಯಸಿರು ವುದರಿಂದ ಅವರನ್ನು ಸಮ್ಮಾನಿಸಲಾಗುತ್ತಿದೆ ಎಂದವರು ಹೇಳಿದರು.

ಕರಾವಳಿ ಪ್ರದೇಶಗಳ ಮೀನುಗಾರರನ್ನು ರಕ್ಷಣಾ ಕಾರ್ಯಾ ಚರಣೆಗೆ ಬಳಸಿಕೊಳ್ಳುವ ವೇಳೆ ಸರಕಾರಕ್ಕೆ ಈ ಕುರಿತು ಸ್ಪಷ್ಟ  ಕಲ್ಪನೆಯಿತ್ತು. ರಾಜ್ಯದಲ್ಲಿ ಆ. 15ರಂದು ಅಸಾಮಾನ್ಯವಾಗಿ ಭಾರೀ ಮಳೆ ಸುರಿಯಲಾರಂಭಿಸಿ ಪ್ರವಾಹ ಉಂಟಾದಾಗ ಸರಕಾರ ರಕ್ಷಣಾ ಕಾರ್ಯಾಚರಣೆಗಳಿಗೆ ಮೀನುಗಾರರ ನೆರವು ಪಡೆಯಲು ನಿರ್ಧರಿಸಲಾಯಿತು. ಕೊಲ್ಲಂ ಕರಾವಳಿ ಸೇರಿದಂತೆ ಮೀನುಗಾರರ ಮನೆಗಳಿರುವ ಪ್ರದೇಶಗಳ ಸುತ್ತ ಧ್ವನಿವರ್ಧಕಗಳ ಮೂಲಕ ಪ್ರಕಟನೆಗಳನ್ನು ನೀಡಿ ಪ್ರವಾಹಪೀಡಿತ ಒಳನಾಡು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮೀನುಗಾರರನ್ನು ವಿನಂತಿಸಲಾಯಿತು. 
– ಮರ್ಸಿಕುಟ್ಟಿ ಅಮ್ಮ

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.