Kerala ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ
ಉಮ್ಮನ್ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.
Team Udayavani, Jul 18, 2023, 7:36 AM IST
ಕೇರಳ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79) ಜು.18ರ ಮಂಗಳವಾರ ಬೆಳಿಗ್ಗೆ ನಿಧನದಾದರು.
ಉಮ್ಮನ್ ಚಾಂಡಿ ನಿಧನದ ಬಗ್ಗೆ ಅವರ ಪುತ್ರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಕೇರಳ ಸರ್ಕಾರ ಎರಡು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಮಂಗಳವಾರ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಉಮ್ಮನ್ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.
The tale of the king who triumphed over the world with the power of ‘love’ finds its poignant end.
Today, I am deeply saddened by the loss of a legend, @Oommen_Chandy. He touched the lives of countless individuals, and his legacy will forever resonate within our souls. RIP! pic.twitter.com/72hdK6EN4u
— K Sudhakaran (@SudhakaranINC) July 18, 2023
ಉಮ್ಮನ್ ಚಾಂಡಿ ಅವರು ಕೇರಳದ 10ನೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಚಾಂಡಿ ಅವರು 2004ರಿಂದ 2006ರವರೆಗೆ ಮತ್ತು 2011ರಿಂದ 2016ರವರೆಗೆ ಮುಖ್ಯಮಂತ್ರಿಯಾಗಿದ್ದರು. 2006ರಿಂದ 2011ರವರೆಗೆ ಕೇರಳ ವಿಧಾನಸಭೆಯ ವಿಪಕ್ಷ ನಾಯಕನಾಗಿದ್ದರು.
ಚಾಂಡಿ ಅವರು 1970ರಿಂದ 2023(ನಿಧನರಾಗುವವರೆಗೆ) ಪುತ್ತುಪಲ್ಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ದೀರ್ಘಾವಧಿಗೆ ಶಾಸಕರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಚಾಂಡಿ ಪಾತ್ರರಾಗಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾಗಿದ್ದಾರೆ.
1943ರ ಅಕ್ಟೋಬರ್ 31ರಂದು ಕೊಟ್ಟಾಯಮ್ ಜಿಲ್ಲೆಯ ಪುತ್ತುಪಲ್ಲಿ ಎಂಬಲ್ಲಿ ಉಮ್ಮನ್ ಚಾಂಡಿ ಜನಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕೇರಳ ಸ್ಟೂಡೆಂಟ್ಸ್ ಯೂನಿಯನ್ (KSU)ನ ಕಾರ್ಯಕರ್ತನಾಗಿದ್ದು, ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್ ಯುನ ಘಟಕಾಧ್ಯಕ್ಷರಾಗಿ ಚಾಂಡಿ ಕಾರ್ಯನಿರ್ವಹಿಸಿದ್ದರು. ನಂತರ ರಾಜ್ಯಾಧ್ಯಕ್ಷರಾಗಿದ್ದರು. ಬಿಎ ಪದವೀಧರರಾಗಿದ್ದ ಚಾಂಡಿ ನಂತರ ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ದೀರ್ಘಾವಧಿ ಅನಾರೋಗ್ಯದಿಂದ ಚಾಂಡಿ(79ವರ್ಷ) ಅವರು ಜುಲೈ 18ರಂದು ವಿಧಿವಶರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.