Kerala CM ತನ್ನ ಮೇಲೆ ದೈಹಿಕ ಹಲ್ಲೆಗೆ ಸಂಚು: ಕೇರಳ ರಾಜ್ಯಪಾಲ ಖಾನ್ ಆರೋಪ
Team Udayavani, Dec 11, 2023, 11:28 PM IST
ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಸಿಪಿಐ (ಎಂ)ನ ವಿದ್ಯಾರ್ಥಿ ಘಟಕವಾಗಿರುವ ಎಸ್ಎಫ್ಐಯ ಸದಸ್ಯ ಕಿಡಿಗೇಡಿಗಳು ಸೋಮ ವಾರ ದಾಳಿಗೆ ಪ್ರಯತ್ನಿಸಿದ ಘಟನೆ ಸಂಭವಿಸಿದೆ.
ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ “ದೈಹಿಕ ಹಲ್ಲೆ’ ಎಸಗಲು ಸಂಚು ಹೂಡಿದ್ದಾರೆ ಎಂದು ರಾಜ್ಯಪಾಲ ಆರಿಫ್ ಮೊಹ ಮ್ಮದ್ ಖಾನ್ ಆರೋಪಿಸಿದ್ದು, ಕೇರಳ ಸರಕಾರ ಮತ್ತು ರಾಜ್ಯಪಾಲರ ನಡುವೆ ಹೊಸ ತಿಕ್ಕಾಟವೊಂದು ಆರಂಭಗೊಂಡಂತಾಗಿದೆ.
ಹೊಸದಿಲ್ಲಿಗೆ ಪ್ರಯಾಣಿಸುವುದಕ್ಕಾಗಿ ತಿರುವನಂತಪುರ ವಿಮಾನ ನಿಲ್ದಾಣದತ್ತ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್ಎಫ್ಐಯ ಸದಸ್ಯರು ದಾಳಿ ನಡೆಸಲು ಮುಂದಾಗಿದ್ದರು. ಘಟನೆಯ ಬಳಿಕ ಕಾರಿನಿಂದ ಇಳಿದು ತೀವ್ರ ಆಕ್ರೋಶಭರಿತರಾಗಿ ಸುದ್ದಿಗಾರರಿಗೆ ಪ್ರತಿಕ್ರಿ ಯಿಸಿದ ರಾಜ್ಯಪಾಲರು ಮುಖ್ಯಮಂತ್ರಿ ಪಿಣರಾಯಿ ಮೇಲೆ ಹಲ್ಲೆ ಯ ಸಂಚಿನ ಆರೋಪ ಮಾಡಿದ್ದಾರೆ. ಕೇರಳದಲ್ಲಿ ಸಾಂವಿಧಾನಿಕ ಯಂತ್ರ ಕುಸಿದಂತೆ ಕಾಣಿಸುತ್ತಿದೆ ಎಂದೂ ರಾಜ್ಯಪಾಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.