Kerala govt ದುಷ್ಟಶಕ್ತಿ ನಿವಾರಣೆಗೆ ಪೂಜೆ: ಸರ್ಕಾರಿ ಅಧಿಕಾರಿ ಅಮಾನತು
Team Udayavani, Nov 20, 2023, 10:08 PM IST
ತಿರುವನಂತಪುರಂ: ದುಷ್ಟಶಕ್ತಿಗಳನ್ನು ಹೊರಹಾಕುವುದಕ್ಕಾಗಿ ಸರ್ಕಾರಿ ಕಚೇರಿಯಲ್ಲಿ ಪೂಜೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.
ಪ್ರಕರಣ ಸಂಬಂಧ ಇಲಾಖೆ ಮಟ್ಟದ ತನಿಖೆ ನಡೆಸಿದ ಬಳಿಕ ಈ ಕ್ರಮ ಕೈಗೊಂಡಿರುವುದಾಗಿ ಆಡಳಿತ ತಿಳಿಸಿದೆ.
ತ್ರಿಶೂರ್ ಜಿಲ್ಲೆಯ ಮಕ್ಕಳ ರಕ್ಷಣಾ ಅಧಿಕಾರಿ ಕೆ.ಎ.ಬಿಂದು ಎಂಬವರು ಸೆಪ್ಟೆಂಬರ್‌ನಲ್ಲಿ ಕಚೇರಿಯಲ್ಲಿ ಪೂಜೆ ಆಯೋಜಿಸಿದ್ದರು ಈ ಕುರಿತು ಅದೇ ಕಚೇರಿಯ ಮಾಜಿ ಉದ್ಯೋಗಿ ದೂರು ಸಲ್ಲಿಸಿದ್ದರು. ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಯು ಇಲಾಖೆ ಮಟ್ಟದ ತನಿಖೆಗೆ ಆದೇಶಿಸಿದ್ದರು. ಅದರಂತೆ ದೂರುದಾರರು, ಕಚೇರಿ ಸಿಬ್ಬಂದಿಯನ್ನು ವಿಚಾರಣೆ ನಡೆಸಿ ಅಧಿಕಾರಿ ಬಿಂದು ಅವರನ್ನು ಅಮಾನತುಗೊಳಿಸಿದ್ದಾರೆ. ಆದರೆ, ಆಡಳಿತ ಬಿಂದು ಅವರ ವಾದ/ ಹೇಳಿಕೆಯನ್ನು ಆಲಿಸಿಲ್ಲವೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.