Kerala High Court ಅಕ್ರಮ ಪಟಾಕಿ: ದಾಳಿಗೆ ಸೂಚನೆ
Team Udayavani, Nov 3, 2023, 11:46 PM IST
ತಿರುವನಂತಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಪಟಾಕಿಗಳನ್ನು ವಶಪಡಿಸಿ ಕೊಳ್ಳುವ ನಿಟ್ಟಿನಲ್ಲಿ ಎಲ್ಲ ಧಾರ್ಮಿಕ ಕ್ಷೇತ್ರಗಳಲ್ಲೂ ಶೋಧ ನಡೆಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.
ಕೆಲವು ಧಾರ್ಮಿಕ ಕ್ಷೇತ್ರಗಳಲ್ಲಿ ಮಧ್ಯ ರಾತ್ರಿಯ ಬಳಿಕವೂ ಪಟಾಕಿ ಸಿಡಿಸುತ್ತಿರುವುದರಿಂದ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಮತ್ತು ಇದನ್ನು ತಡೆಗಟ್ಟಲು ನಿರ್ದೇಶನ ಕೋರಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಮನವಿಯನ್ನು ನ್ಯಾ| ಅಮಿತ್ ರಾವಲ್ ನೇತೃತ್ವದ ನ್ಯಾಯಪೀಠ ಪುರಸ್ಕರಿಸಿದೆ. ಹೀಗಾಗಿ ಕೇರಳದ ಎಲ್ಲ ಜಿಲ್ಲಾಡಳಿತಗಳೂ ಧಾರ್ಮಿಕ ಕ್ಷೇತ್ರಗಳಲ್ಲಿ ಶೋಧ ನಡೆಸಿ, ಅಕ್ರಮವಾಗಿ ಸಂಗ್ರಹಿ ಸಿರುವ ಪಟಾಕಿಗಳನ್ನು ವಶಪಡಿಸಿಕೊಂಡು ಪಟಾಕಿ ಸಿಡಿಸದಂತೆಯೂ ಸೂಚನೆ ನೀಡ ಬೇಕು. ಯಾವುದೇ ಧರ್ಮಗ್ರಂಥವೂ ಪಟಾಕಿ ಸಿಡಿಸಿ ದೇವರನ್ನು ಪ್ರಸನ್ನಗೊಳಿಸಿ ಎಂದಿಲ್ಲವೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.