ಎರಡು ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಕೇರಳ ಸರ್ಕಾರ
Team Udayavani, Jul 21, 2021, 6:02 PM IST
ಕೇರಳ: ಸುಪ್ರೀಂ ಕೋರ್ಟ್ ತರಾಟೆಯಿಂದ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ ರಾಜ್ಯಾದ್ಯಂತ ಜುಲೈ 24 ಹಾಗೂ 25 ರಂದು ಎರಡು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಇಂದು ( ಜುಲೈ 21) ಆದೇಶ ಹೊರಡಿಸಿದೆ.
ಇಂದು ಆದೇಶ ಹೊರಡಿಸಿರುವ ಸರ್ಕಾರ ವಾರಾಂತ್ಯದಲ್ಲಿ ಎರಡು ದಿನ ಕಟ್ಟುನಿಟ್ಟಿನ ಲಾಕ್ ಡೌನ್ ಹೇರುವಂತೆ ಜಿಲ್ಲಾಡಳಿತಗಳಿಗೆ ಆದೇಶ ನೀಡಿದೆ. ಜುಲೈ 12-13 ರಂದು ವಿಧಿಸಲಾಗಿರುವ ಕಠಿಣ ನಿರ್ಬಂಧಗಳು ಜಾರಿಯಲ್ಲಿರಲಿದ್ದು, ಯಾವುದೇ ರೀತಿಯ ಸಡಿಲಿಕೆಗಳು ಇರುವುದಿಲ್ಲ ಎಂದು ತಿಳಿಸಿದೆ.
ಇನ್ನು ಕೋವಿಡ್ 19 ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದರೂ ಬಕ್ರೀದ್ ಆಚರಣೆಗಾಗಿ ಮೂರು ದಿನಗಳ ಕಾಲ ನಿರ್ಬಂಧಗಳನ್ನು ಸಡಿಲಗೊಳಿಸಿರುವ ಕೇರಳ ಸರಕಾರವನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತ್ತು.
ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುವಂತೆ ವ್ಯಾಪಾರಿಗಳ ಬೇಡಿಕೆಗೆ ಮಣಿದ ರಾಜ್ಯ ಸರಕಾರದ ನಿರ್ಧಾರ ಆಘಾತಕಾರಿ ಎಂದು ಅದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.