ಕೇರಳ ಮಳೆ: ಎಂಟು ಜಿಲ್ಲೆಗಳಿಗೆ “ಯೆಲ್ಲೊ ಅಲರ್ಟ್’
ಭಾನುವಾರದವರೆಗೆ ಭಾರೀ ಮಳೆ ಸುರಿಯುವ ಮಾಹಿತಿ
Team Udayavani, May 20, 2022, 10:31 PM IST
ತಿರುವನಂತಪುರ: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿರುವ ಕೇರಳದಲ್ಲಿ ಶನಿವಾರದವರೆಗೆ ಮತ್ತಷ್ಟು ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, 9 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ತಿರುವನಂತಪುರ, ಕೊಲ್ಲಂ, ಪಟ್ಟಣಂತಿಟ್ಟ, ಅಳಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಮಲಪ್ಪುರಂ ಹಾಗೂ ಕಲ್ಲಿಕೋಟೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಈ ಕುರಿತಂತ ಪ್ರಕಟಣೆ ನೀಡಿರುವ ಐಎಂಡಿ, ಯೆಲ್ಲೋ ಅಲರ್ಟ್ ನೀಡಲಾಗಿರುವ ಜಿಲ್ಲೆಗಳಲ್ಲಿ 20ರಿಂದ 22ರ ನಡುವಿನ ಅವಧಿಯಲ್ಲಿ 7ರಿಂದ 11 ಸೆಂ.ಮೀ.ವರೆಗೆ ಧಾರಾಕಾರ ಮಳೆ ಸುರಿಯಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.
ಮತ್ತೊಂದೆಡೆ, ನೈರುತ್ಯ ಮಳೆ ಮಾರುತಗಳು ರಾಜ್ಯವನ್ನು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ, ಹಿರಿಯ ಅಧಿಕಾರಿಗಳ ಸಭೆ ಕರೆದು ಈಗಾಗಲೇ ಕೈಗೊಂಡಿರುವ ಹಾಗೂ ಮುಂದೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಚರ್ಚೆ ನಡೆಸಿದೆ. ಕೇರಳಕ್ಕೆ ರಾಷ್ಟ್ರೀಯ ವಿಪತ್ತು ದಳದ ಐದು ತುಕಡಿಗಳು ಆಗಮಿಸಿವೆ.
ಸಾವಿನ ಸಂಖ್ಯೆ 8ಕ್ಕೇರಿಕೆ
ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿ ಕಳೆದ ಆರು ದಿನಗಳ ಹಿಂದೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಶುಕ್ರವಾರದಂದು ಪಂಜಾಬಿ ಢಾಬಾದ ಹಿಂಭಾಗದಲ್ಲಿ ಶುಕ್ರವಾರ ಪತ್ತೆಯಾಗಿದೆ. ಅಲ್ಲಿಗೆ, ಮಳೆಯಿಂದಾಗಿ ಸತ್ತವರ ಸಂಖ್ಯೆ 8ಕ್ಕೇರಿದೆ.
ನಾಪತ್ತೆಯಾದವರ ಪತ್ತೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದ್ದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ಅವರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಇಟಾನಗರದ ಪೊಲೀಸ್ ವರಿಷ್ಠಾಧಿಕಾರಿ ಜಿಮ್ಮಿ ಚಿರಾಮ್ ತಿಳಿಸಿದ್ದಾರೆ.
ಮತ್ತೊಂದೆಡೆ, ಅಸ್ಸಾಂನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಹಲವಾರು ಹಳ್ಳಿಗಳು ಜಲಾವೃತವಾಗಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಜಾರಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.