ಹೊರ ರಾಜ್ಯದಲ್ಲಿರುವ ಕೇರಳಿಗರು ರಾಜ್ಯಕ್ಕೆ ಮರಳಲು ಆರು ಗಡಿ ಮಾರ್ಗ ತೆರೆದ ಪಿಣರಾಯಿ ಸರಕಾರ
Team Udayavani, May 5, 2020, 5:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರ: ಕೋವಿಡ್ 19 ವೈರಸ್ ಲಾಕ್‌ಡೌನ್‌ನಿಂದಾಗಿ ಇತರ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕೇರಳಿಗರು ರಾಜ್ಯಕ್ಕೆ ಮರಳಲು ಅನುಕೂಲವಾಗುವಂತೆ ಗಡಿಯಲ್ಲಿನ ಆರು ಕಡೆಯಲ್ಲಿನ ಮಾರ್ಗಗಳನ್ನು ಕೇರಳ ರಾಜ್ಯ ಸರಕಾರ ಸೋಮವಾರ ತೆರೆದಿದೆ.
ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಗಡಿಯಲ್ಲಿನ ತನ್ನೆಲ್ಲಾ ಮಾರ್ಗಗಳನ್ನು ಕೇರಳ ಸರಕಾರ ಮುಚ್ಚಿತ್ತು. ಆ ಪೈಕಿ ಪ್ರಸ್ತುತ ತಿರುವನಂತಪುರದ ಇಂಚಿವಿಲ, ಕೊಲ್ಲಂ ಜಿಲ್ಲೆಯ ಆರ್ಯಂಕವು, ಇಡುಕ್ಕಿ ವ್ಯಾಪ್ತಿಯ ಕುಮಿಲಿ, ಪಾಲಕ್ಕಾಡ್ ಜಿಲ್ಲೆಯ ವಲಯಾರ್, ವಯನಾಡ್ ಜಿಲ್ಲೆಯ ಮುತಂಗ ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸೇರಿ 6 ಕಡೆ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಈ ಚೆಕ್‌ಪೋಸ್ಟ್‌ಗಳ ಮೂಲಕ ತನ್ನ ರಾಜ್ಯದ ಜನರಿಗೆ ಮಾತ್ರ ಪ್ರವೇಶ ನೀಡುವುದಾಗಿ ಸರಕಾರ ತಿಳಿಸಿದೆ.
ಅಂತಾರಾಜ್ಯ ಗಡಿಯಲ್ಲಿನ ಮಾರ್ಗಗಳನ್ನು ತೆರೆದ ಬಳಿಕ ದೇಶದ ವಿವಿಧ ರಾಜ್ಯಗಳಲ್ಲಿರುವ 1.5 ಲಕ್ಷ ಕೇರಳಿಗರು ರಾಜ್ಯಕ್ಕೆ ವಾಪಸಾಗಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ನಡುವೆ ಗಡಿಯಲ್ಲಿನ ಪ್ರತಿಯೊಂದು ಪ್ರವೇಶ
ಮಾರ್ಗದ ಬಳಿ 500 ಮಂದಿ ಉಳಿದುಕೊಳ್ಳಲು ಮತ್ತು ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಆಯಾ ಜಿಲ್ಲಾಡಳಿತಗಳಿಗೆ ಸರಕಾರ ಸೂಚನೆ ನೀಡಿದೆ.
ಕೇರಳಿಗರನ್ನು ಬರಮಾಡಿಕೊಳ್ಳಲು ಗಡಿಯಲ್ಲಿ 60 ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಿ.ಸುಜಿತ್ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.