ದೇಗುಲದಲ್ಲೇ ಮುಸ್ಲಿಮರಿಗೆ ಇಫ್ತಾರ್!
Team Udayavani, Jun 3, 2017, 3:45 AM IST
ತಿರುವನಂತಪುರ: ರಂಜಾನ್ ಅಂಗವಾಗಿ ಒಂದು ತಿಂಗಳು ಉಪವಾಸ ವ್ರತ ಮಾಡುತ್ತಿರುವ ಮುಸ್ಲಿಮರಿಗಾಗಿ, ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯವೊಂದು ಸಸ್ಯಾಹಾರಿ ಇಫ್ತಾರ್ ಕೂಟ ಏರ್ಪಡಿಸುವ ಮೂಲಕ ಗಮನಸೆಳೆದಿದೆ.ಕೇಂದ್ರ ಸರ್ಕಾರದ “ವಧೆಗಾಗಿ ಜಾನುವಾರು ಮಾರಾಟ ನಿಷೇಧ’ ಅಧಿಸೂಚನೆಗೆ ಪ್ರತಿರೋಧವಾಗಿ ಈ ಸೇವಾ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆಯಾದರೂ ಇದರ ಹಿಂದಿನ ಉದ್ದೇಶವೇ ಬೇರೆ.
ವೆಜ್ ಇಫ್ತಾರ್ ನಡೆಯುತ್ತಿರುವುದು ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿರುವ ಮಲಪ್ಪುರಂ ಜಿಲ್ಲೆಯ ಪುನ್ನಥಲ ಗ್ರಾಮದ ಶ್ರೀ ನರಸಿಂಹಮೂರ್ತಿ ದೇವಾಲಯದಲ್ಲಿ. ಅಧಿಸೂಚನೆ ವಿರೋಧಿಸುವ ಉದ್ದೇಶ ಒಂದೆಡೆಯಾದರೆ, ಮತ್ತೂಂದೆಡೆ ಇತ್ತೀಚೆಗೆ ನಡೆದ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಮುಸ್ಲಿಮರು ಉದಾರವಾಗಿ ದೇಣಿಗೆ ನೀಡಿ ಸಹಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸಲು ಈ ಇಫ್ತಾರ್ ಕೂಟ ಏರ್ಪಡಿಸಲಾಗಿದೆ.
ಸಾಮೂಹಿಕ ಅನ್ನದಾನ ನಡೆಸಲು ಮುಂದಾಗಿದ್ದ ಆಡಳಿತ ಮಂಡಳಿ, ನಂತರ ನಿಲುವು ಬದಲಿಸಿತು. ರಂಜಾನ್ ತಿಂಗಳಲ್ಲಿ ದಿನವಿಡೀ ಉಪವಾಸವಿರುವ ಮುಸ್ಲಿಮರು, ಸಂಜೆಯ ವೇಳೆ ಆಹಾರ ಸೇವಿಸುವ ಮೂಲಕ ಉಪವಾಸ ಮುರಿಯುತ್ತಾರೆ. ಹೀಗಾಗಿ ಅವರಿಗಾಗಿ ಸಸ್ಯಾಹಾರಿ ಇಫ್ತಾರ್ ಕೂಟ ಏರ್ಪಡಿಸಲು ನಿರ್ಧರಿಸಿತು. ಬುಧವಾರ ಸಂಜೆ ಸುಮಾರು 500ಕ್ಕೂ ಹೆಚ್ಚು ಮುಸ್ಲಿಮರು ದೇವಾಲಯ ಪ್ರವೇಶಿಸಿ ಆಹಾರ ಸೇವಿಸಿದರು. ಈ ಭಾಗ ಭಾವೈಕ್ಯತೆಗೆ ಹೆಸರಾಗಿದ್ದು, ಎಲ್ಲ ಹಬ್ಬಗಳನ್ನು ಧರ್ಮಭೇದವಿಲ್ಲದೆ ಆಚರಿಸಲಾಗುತ್ತದೆ. ದೇಗುಲದ ಜೀಣೋದ್ಧಾರಕ್ಕೆ ಧನಸಹಾಯವಷ್ಟೇ ಅಲ್ಲದೆ ನಿರ್ಮಾಣ ಕಾರ್ಯದಲ್ಲೂ ಮುಸ್ಲಿಮರು ಕೈಜೋಡಿಸಿದ್ದು, ಈ ಗ್ರಾಮದಲ್ಲಿ ಇರುವ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.